No menu items!
22.3 C
Munich
Friday, June 19, 2026

ಪ್ರವಾಸಕ್ಕೆ ತೆರಳಿದ್ದ ಯುವಕನಿಗೆ ಹೃದಯಘಾತ

Must read

ಕೊಡಗು: ಪ್ರವಾಸಕ್ಕೆ ತೆರಳಿದ್ದ ಯುವಕ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ತಡಿಯಂಡಮೋಳ್ ಬೆಟ್ಟದಲ್ಲಿ ನಡೆದಿದೆ.

ಹರಿಯಾಣ ಮೂಲದ ಜತಿನ್ (25) ಮೃತಪಟ್ಟ ಯುವಕ. ಜತಿನ್ ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ‌ ಮಾಡುತ್ತಿದ್ದನು. 5 ಮಂದಿ ಸ್ನೇಹಿತರ ಜೊತೆ ತಡಿಯಂಡಮೋಳ್ ಬೆಟ್ಟಕ್ಕೆ ಬಂದಿದ್ದನು. ಬೆಟ್ಟದ ಮೇಲೆ ತಲುಪಿದಾಗ ತೀವ್ರತರಹದ ಎದೆನೋವಿಗೆ ಒಳಗಾದ ಜತಿನ್ ಹೃದಯಾಘಾತದಿಂದ ಬೆಟ್ಟದ ಮೇಲೆ ಕೊನೆಯುಸಿರೆಳೆದಿದ್ದಾನೆ.

ಸ್ಥಳಕ್ಕೆ ನಾಪೋಕ್ಲು ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ದುರ್ಗಮ ಹಾದಿಯಲ್ಲೆ ಪ್ರವಾಸಿಗನ ಮೃತದೇಹ ಹೊತ್ತು ತಂದಿದ್ದಾರೆ.

- Advertisement -spot_img

More articles

- Advertisement -spot_img

Latest article