ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ರೈತರಿಗೆ ಬರ ಪರಿಹಾರ ನೀಡುವಲ್ಲಿ ಮೀನಾಮೇಷ ಎಣಿಸುತ್ತಿದೆ. ಆದರೆ ʼರಾಜಕೀಯ ಗಂಜಿ ಕೇಂದ್ರʼಗಳನ್ನು ಯಥೇಚ್ಚವಾಗಿ ಸೃಷ್ಟಿ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬರದ ನಡುವೆಯೂ ಮೂವರು ಹಿರಿಯ ಶಾಸಕರಿಗೆ ಸಂಪುಟ ದರ್ಜೆ ಭಾಗ್ಯ ಕರುಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ರಮವನ್ನು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ಈ ಸರಕಾರ ರೈತರನ್ನು ಬಹಳ ಕೇವಲವಾಗಿ ನಡೆಸಿಕೊಳ್ಳುತ್ತಿದೆ. ಆದರೆ, ಅಧಿಕಾರನ್ನು ಭರ್ಜರಿಯಾಗಿ ಅನುಭವಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದರು. ಸಲಹೆಗಾರರನ್ನು ನೇಮಕ ಮಾಡಿಕೊಂಡಿರುವ ಸಿಎಂಗೆ ಹ್ಯಾಟ್ಸಾಫ್ ಎಂದ ಹೆಚ್ಡಿಕೆ ಅವರು; ಸಿಎಂ ಅವರು ಬಿ.ಆರ್.ಪಾಟೀಲ್ ಅವರನ್ನು ಸಲಹೆಗಾರರನ್ನಾಗಿ ನೆಮಕ ಮಾಡಿಕೊಂಡಿದ್ದಾರೆ. ಬಸವರಾಜ ರಾಯರೆಡ್ಡಿ ಅವರಿಗೆ ಆರ್ಥಿಕ ಸಲಹೆಗಾರರು ಎಂದು ಮಾಡಿ ಸಂಪುಟ ದರ್ಜೆ ನೀಡಿದ್ದಾರೆ. ಹಾಗೆಯೇ, ರಾಜ್ಯದ 3ನೇ ಆಡಳಿತ ಸುಧಾರಣಾ ಆಯೋಗಕ್ಕೆ ಆರ್.ವಿ.ದೇಶಪಾಂಡೆ ಅವರಿಗೆ ಅವಕಾಶ ನೀಡಿ ಅವರಿಗೂ ಸಂಪುಟ ದರ್ಜೆ ಕೊಟ್ಟಿದ್ದಾರೆ ಎಂದು ಕಿಡಿಕಾರಿದರು.
ಸಲಹೆದಾರರಿಗೆ ಸಂಪುಟ ದರ್ಜೆ ಭಾಗ್ಯ ಕರುಣಿಸಿದ ಮುಖ್ಯಮಂತ್ರಿ ಕ್ರಮಕ್ಕೆ ಹೆಚ್‌ಡಿಕೆ ಲೇವಡಿ
Date: