ಬೆಂಗಳೂರು: ಜನವರಿ ನಾಲ್ಕರಂದು ನಾನು ಮತ್ತು ಮುಖ್ಯಮಂತ್ರಿಗಳು ದೆಹಲಿಗೆ ಹೋಗುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಮಾಡುವ ವಿಚಾರವಾಗಿ ಜನವರಿ ನಾಲ್ಕರಂದು ನಾನು ಮತ್ತು ಮುಖ್ಯಮಂತ್ರಿಗಳು ದೆಹಲಿಗೆ ಹೋಗುತ್ತೇವೆ. ಪಕ್ಷದ ಸಭೆ ಇದೆ, ಚರ್ಚೆ ಮಾಡುವುದಿದೆ. ನಮ್ಮೆಲ್ಲಾ ಮಂತ್ರಿಗಳು ವರದಿ ನೀಡಿದ್ದಾರೆ. ಅಭ್ಯರ್ಥಿಗಳ ಬಗ್ಗೆ ಸರ್ವೆ ಮಾಡಬೇಕು, ಕ್ಷೇತ್ರಗಳಿಗೆ ಹೋಗುತ್ತೇವೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.
ಇನ್ನು ನಿಗಮ ಮಂಡಳಿಗಳಲ್ಲಿ ಶಾಸಕರ ಸಂಖ್ಯೆಯಷ್ಟೇ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುವುದು. ನಾವು ನೀಡಿದ ಪಟ್ಟಿಯನ್ನು ವರಿಷ್ಠರು ಒಪ್ಪಿಕೊಂಡಿದ್ದಾರೆ. ಸಂಕ್ರಾಂತಿ ಒಳಗೆ ನೇಮಕ ಮಾಡಲಾಗುತ್ತದೆ. ಕಾರ್ಯಕರ್ತರ ಪಟ್ಟಿ ಬಂದಿದೆ, ಈ ಬಗ್ಗೆ ಚರ್ಚೆ ಮಾಡಲು 10ನೇ ತಾರೀಕು ಸಭೆ ಕರೆದಿದ್ದೇವೆ. ಬ್ಲಾಕ್ ಅಧ್ಯಕ್ಷರ ಜೊತೆಯೂ ಚರ್ಚೆ ಮಾಡಿ ಅಂತಿಮಗೊಳಿಸುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು.
ನಾನು ಮತ್ತು ಮುಖ್ಯಮಂತ್ರಿಗಳು ದೆಹಲಿಗೆ ಹೋಗುತ್ತೇವೆ !
Date: