No menu items!
20.3 C
Munich
Friday, August 21, 2026

ಮಾಡ್ರನ್ ಡ್ರೆಸ್ ಧರಿಸಿದಕ್ಕೆ ಪತ್ನಿಯ ಬರ್ಬರ ಕೊಲೆಗೈದ ಪತಿರಾಯ..!

Must read

  1. ಹಾಸನ: ಮಾಡ್ರನ್ ಡ್ರೆಸ್ ಧರಿಸಿದಕ್ಕೆ ಗಂಡ ಪತ್ನಿಯನ್ನ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿ ಮೂಲದ ಜ್ಯೋತಿ (22) ಕೊಲೆಯಾದ ಮಹಿಳೆ, ರಾಂಪುರ ಗ್ರಾಮದ ನಿವಾಸಿ ಜೀವನ್ (25) ಪತ್ನಿ ಕೊಲೆಗೈದ ಆರೋಪಿ. ಜೀವನ್‌, ಜ್ಯೋತಿ ಈ ಹಿಂದೆ ಗಾರ್ಮೆಂಟ್ಸ್‌ನಲ್ಲಿ ಪರಸ್ಪರ ಕೆಲಸ ಮಾಡುತ್ತಿದ್ದಾಗಲೇ ಪ್ರೀತಿಸಿ ಮದುವೆಯಾಗಿದ್ದರು.

  2. ಕಳೆದ 6 ತಿಂಗಳ ಹಿಂದೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸದಾ ಮಾಡ್ರನ್‌ ಡ್ರೆಸ್‌ ಧರಿಸುತ್ತಿದ್ದ ಜ್ಯೋತಿ ಬೋಲ್ಡ್‌ ಆಗಿ ಇರುತ್ತಿದ್ದರು. ಇದೇ ಕಾರಣಕ್ಕೆ ಪತಿ ಜೀವನ್‌ ಕೋಪಗೊಂಡಿದ್ದ, ಅನುಮಾನ ಪಟ್ಟು ಜಗಳವಾಡಿದ್ದ.
    ಶನಿವಾರ ಸಂಜೆಯು ಸಹ ಮಾಡ್ರನ್‌ ಡ್ರೆಸ್‌ ಹಾಕಿಕೊಂಡು ಜ್ಯೋತಿ ಹೊರಗೆ ಹೊರಟಿದ್ದಳು. ಆಗಲೂ ಜೀವನ್‌ ವಿರೋಧಿಸಿದ್ದ, ಕೊನೆಗೆ ಬೈಕ್‌ನಲ್ಲಿ ಡ್ರಾಪ್‌ ಕೊಡುವುದಾಗಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದ ಜೀವನ್‌ ಚಾಕುವಿನಿಂದ ಕುತ್ತಿಗೆ ಕೊಯ್ದು ಪತ್ನಿಯನ್ನ ಬರ್ಬರವಾಗಿ ಹತ್ಯೆಗೈದಿದ್ದಾನೆ. ಬಳಿಕ ಎಸ್ಕೇಪ್‌ ಆಗಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಅರಸೀಕೆರೆ ತಾಲೂಕಿನ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -spot_img

More articles

- Advertisement -spot_img

Latest article