ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರತಿಷ್ಠಿತ ಮಾಲ್ʼಗಳಲ್ಲಿ ಒಂದಾದ ಮಾಲ್ ಆಫ್ ಏಷ್ಯಾ ಮುಂದಿನ 15 ದಿನಗಳ ಕಾಲ ಕ್ಲೋಸ್ ಆಗಲಿದೆ. ಅಲ್ಲದೇ ಮಾಲ್ ಆಫ್ ಏಷ್ಯಾ ಬಳಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಹೌದು ಮಾಲ್ ಆಫ್ ಏಷ್ಯಾ ಮೇಲೆ ಕರವೇ ಕಾರ್ಯಕರ್ತರ ಮುತ್ತಿಗೆ ಹಿನ್ನೆಲೆ ಭಾನುವಾರದಿಂದ 15 ದಿನಗಳವರೆಗೆ ಮಾಲ್ ಅನ್ನು ಮುಚ್ಚಲಾಗುತ್ತದೆ. ಮಾತ್ರವಲ್ಲದೇ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಅನ್ನು ಜಾರಿ ಮಾಡಿ ಆದೇಶ ನೀಡಲಾಗಿದೆ. ಇತ್ತೀಚಿಗಷ್ಟೆ ಬೆಂಗಳೂರಿನಾದ್ಯಂತ ಕರವೇ ಕಾರ್ಯಕರ್ತರು ಕನ್ನಡ ನಾಮಫಲಕ ಹಾಕುವಂತೆ ಹೋರಾಟ ಮಾಡಿದ್ದರು. ನಾಮಫಲಕದಲ್ಲಿ ಕನ್ನಡ ಬಳಕೆಗೆ ಒತ್ತಾಯಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆ ವೇಳೆ ಮಾಲ್ ಆಫ್ ಏಷ್ಯಾಕ್ಕೆ ದಾಳಿ ನಡೆಸಿದ್ದರು. ಈ ವೇಳೆ ನಾಮಫಲಕ ಒಡೆದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಸಂಬಂಧ ಕೊಡಿಗೇಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಮುಂಜಾಗ್ರತೆ ಹಿನ್ನೆಲೆ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.
ಕನ್ನಡ ನಾಮಫಲಕ ಅಳವಡಿಸದ್ದಕ್ಕೆ 15 ದಿನ ಮಾಲ್ ಆಫ್ ಏಷ್ಯಾ ಬಂದ್
Date: