ಕೊಪ್ಪಳ: ಹಳೇ ಪ್ರಕರಣಗಳನ್ನೆಲ್ಲಾ ವಿಲೇವಾರಿ ಮಾಡುವಂತೆ ಸೂಚಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕೊಪ್ಪಳ ತಾಲೂಕಿನ ಬಸಾಪುರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮ ಜನ್ಮಭೂಮಿ ಕರಸೇವೆಗೂ ಮೊದಲು ಹುಬ್ಬಳ್ಳಿಯಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ ವಿಚಾರದ ಕುರಿತು ಮಾತನಾಡಿದ ಅವರು, ಹಳೇ ಪ್ರಕರಣಗಳನ್ನೆಲ್ಲಾ ವಿಲೇವಾರಿ ಮಾಡುವಂತೆ ಸೂಚಿಸಿದ್ದೇವೆ.
1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗುತ್ತಿದೆ. ಅದು ಎಷ್ಟೇ ವರ್ಷ ಆಗಲಿ, ತಪ್ಪಿತಸ್ಥರನ್ನು ಸುಮ್ಮನೆ ಬಿಡಬೇಕಾ? ನಾವು ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಹೈಕೋರ್ಟ್ ನಿರ್ದೇಶನದಂತೆ ನಾವು ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಸಮಜಾಯಿಷಿ ನೀಡಿದರು.
ಹೈಕೋರ್ಟ್ ನಿರ್ದೇಶನದಂತೆ ನಾವು ಕ್ರಮ ಕೈಗೊಳ್ಳುತ್ತಿದ್ದೇವೆ !
Date: