ಜಪಾನ್‌ʼನಲ್ಲಿ ಮತ್ತೆ ಭೂಕುಸಿತ: 62 ಜನರು ಸಾವು – 300 ಕ್ಕೂ ಹೆಚ್ಚು ಮಂದಿಗೆ ಗಾಯ

Date:

ಟೋಕಿಯೊ: ಹೊಸ ವರ್ಷದಿಂದ ಜಪಾನ್‌ʼಗೆ ಸಂಕಷ್ಟ ಎದುರಾಗಿದೆ. ಜನವರಿ 1 ರಂದು ಸಂಭವಿಸಿದ 7.5 ತೀವ್ರತೆಯ ಭೂಕಂಪವು, ಹೊನ್ಶು ಮುಖ್ಯ ದ್ವೀಪದ ಇಶಿಕಾವಾ ಪ್ರಾಂತ್ಯದಲ್ಲಿ ಒಂದು ಮೀಟರ್ ಎತ್ತರದ ಸುನಾಮಿ ಅಲೆಗಳನ್ನು ಸೃಷ್ಟಿಸಿತು. ಜೊತೆಗೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಹುಟ್ಟುಹಾಕಿತು. ಇದರಿಂದ 62 ಜನರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ ಏರಿಕೆಯಾಗುತ್ತಿದೆ. ಭೂಕಂಪದ ನಂತರ ಭೂಕುಸಿತಗಳು ಮತ್ತು ಭಾರೀ ಮಳೆಯಾಗುವ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ನೂರಾರು ಕಟ್ಟಡಗಳು ಬೆಂಕಿಯಿಂದ ಧ್ವಂಸಗೊಂಡಿವೆ. ವಾಜಿಮಾ ಮತ್ತು ಸುಜು ಸೇರಿದಂತೆ ಹಲವಾರು ಪಟ್ಟಣಗಳಲ್ಲಿ ಮನೆಗಳನ್ನು ನೆಲಸಮವಾಗಿವೆ. ಪ್ರಿಫೆಕ್ಚರ್‌ನ ನೋಟೊ ಪೆನಿನ್ಸುಲಾವು ತೀವ್ರ ಪ್ರಮಾಣದಲ್ಲಿ ಹಾನಿಗೊಳಗಾಗಿದೆ.
ಭೂಕಂಪದಿಂದ ಜಪಾನ್‌ ತತ್ತರಿಸಿದ್ದು, 62 ಜನರು ಸಾವನ್ನಪ್ಪಿದ್ದಾರೆ. 300 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅವರಲ್ಲಿ 20 ಮಂದಿ ಸ್ಥಿತಿ ಗಂಭೀರವಾಗಿದೆ. 31,800 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ರಕ್ಷಣೆ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿನ ಸಂಖ್ಯೆ ಏರುವ ಸಾಧ್ಯತೆ ಇದೆ.

Share post:

Subscribe

spot_imgspot_img

Popular

More like this
Related

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...