ಬೆಂಗಳೂರು: ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಂಗಳೂರಿನಲ್ಲಿ ಪ್ರತಿಕ್ರಿಯೇ ನೀಡಿದ್ದಾರೆ. ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಸ್ಟಂಟ್ ಮಾಡುತ್ತಿದೆ. ಬಾಕಿ ಪ್ರಕರಣಗಳ ವಿಲೇವಾರಿಗೆ ಸರ್ಕಾರ ಮುಂದಾಗಿರುವುದಾಗಿ ಗೃಹ ಸಚಿವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಯಾರು ರಾಜ್ಯಕ್ಕೆ ಅಗೌರವ ನೀಡಿದ್ದಾರೆ. ಯಾರು ಕಾನೂನು ಉಲ್ಲಂಘಿಸಿದ್ದಾರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ನಾವು ಬಿಜೆಪಿಯವರಂತೆ ಅಧಿಕಾರ ದುರ್ಬಳಕೆ ಮಾಡಿಕೊಂಡು, ಅನ್ಯ ಪಕ್ಷದ ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿಲ್ಲ.ಬಿಜೆಪಿ ಸರ್ಕಾರ ಇದ್ದಾಗ ಹುಬ್ಬಳ್ಳಿ, ಬೆಂಗಳೂರಿನಲ್ಲಿ ಎಷ್ಟು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಿದೆ ಎಂಬುದನ್ನು ನೋಡಿ. ನಾವು ಇದುವರೆಗೂ ಆ ರೀತಿ ಮಾಡಿಲ್ಲ. ಮುಂದೆಯೂ ಮಾಡಲ್ಲ ಎಂದು ಹೇಳಿದರು.
ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ವಿಚಾರ: ಡಿ.ಕೆ ಶಿವಕುಮಾರ್ ಹೇಳಿದ್ದೇನು..?
Date: