ಯಂಗ್ ಡೈನಾಮಿಕ್ ಪ್ರಣಂ ದೇವರಾಜ್ ಹೊಸ ಸಿನಿಮಾ ಕಹಾನಿ !

Date:

ಯಂಗ್ ಡೈನಾಮಿಕ್ ಪ್ರಣಂ ದೇವರಾಜ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ತೆಲುಗು ಇಂಡಸ್ಟ್ರೀಗೆ ಕಾಲಿಟ್ಟಿರುವ ಪ್ರಣಂ, ಈಗ ‘S/O ಮುತ್ತಣ್ಣ’ನಾಗಲು ಸಜ್ಜಾಗಿದ್ದಾರೆ.

ಯಂಗ್ ಡೈನಾಮಿಕ್ ಪ್ರಣಂ ದೇವರಾಜ್ ಹೊಸ ಸಿನಿಮಾ ಸೆಟ್ಟೇರಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿ S/O ಮುತ್ತಣ್ಣ ಸಿನಿಮಾದ ಮುಹೂರ್ತ ನೆರವೇರಿದೆ. ದೇವರಾಜ್ ದಂಪತಿ ಆಗಮಿಸಿ ಮಗನ ಚಿತ್ರಕ್ಕೆ ಶುಭಾಶಯ ತಿಳಿಸಿದ್ದಾರೆ. ಅಂದಹಾಗೇ S/O ಮುತ್ತಣ್ಣನಿಗೆ ಶ್ರೀಕಾಂತ್ ಹುಣ್ಸೂರ್ ಸಾರಥಿ. ಆರ್.ಚಂದ್ರು ಹಾಗೂ ಪ್ರೇಮ್ಸ್ ಗರಡಿಯಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಶ್ರೀಕಾಂತ್, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.

ಪ್ರಣಂ ದೇವರಾಜ್ ನಾಯಕನಾಗಿ ನಟಿಸುತ್ತಿರುವ S/O ಮುತ್ತಣ್ಣ ಸಿನಿಮಾದಲ್ಲಿ ರಂಗಾಯಣ ರಘು, ಸುಚೇಂದ್ರ ಪ್ರಸಾದ್, ಗಿರಿ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ, ಅರುಣ್ ಚಕ್ರವರ್ತಿ ತಾರಾಬಳಗದಲ್ಲಿದ್ದಾರೆ. ಟೈಟಲ್ ಹೇಳುವಂತೆ ಇದೊಂದು ಅಪ್ಪ-ಮಗನ ಬಾಂಧವ್ಯದ ಕಥೆಯಾಗಿದ್ದು, ಪುರಾತನ ಫಿಲ್ಮಂಸ್ ಬ್ಯಾನರ್ ನಡಿ ದಿವ್ಯಾ ನಿರ್ಮಾಣ ಮಾಡುತ್ತಿದ್ದಾರೆ. S/O ಮುತ್ತಣ್ಣ ಸಿನಿಮಾಗೆ ಸ್ಕೇಟ್ಟಿಂಗ್ ಕೃಷ್ಣ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ, ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಚಿತ್ರತಂಡ ಶೂಟಿಂಗ್ ನಲ್ಲಿ ಬ್ಯುಸಿಯಾಗಿದೆ.

Share post:

Subscribe

spot_imgspot_img

Popular

More like this
Related

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...