ಕಲಬುರಗಿ: ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ ಮತ್ತೊಂದು ಆರೋಪ ಕೇಳಿಬಂದಿದೆ. ಹೌದು ಬೆಂಗಳೂರು, ಶಿವಮೊಗ್ಗ ಬಳಿಕ ಮತ್ತೊಂದು ಶಾಲೆಯೊಂದರ ಮುಖ್ಯಶಿಕ್ಷಕಿ ವಿದ್ಯಾರ್ಥಿಗಳಿಂದ ಮನೆಗೆಲಸ ಹಾಗೂ ಶೌಚಾಲಯ ಶುಚಿಗೊಳಿಸುತ್ತಿದ್ದ ಆರೋಪ ಕೇಳಿಬಂದಿದ್ದು, ಶಾಲಾ ಮುಖ್ಯಶಿಕ್ಷಕಿ ವಿರುದ್ಧ FIR ದಾಖಲಾಗಿದೆ. ಕಲಬುರಗಿಯ ಮೌಲಾನ ಆಜಾದ್ ಮಾಡೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಘಟನೆ ನಡೆದಿದ್ದು, ವಿದ್ಯಾರ್ಥಿಯೇ ಮುಖ್ಯಶಿಕ್ಷಕಿ ಜೋಹರಾ ಜಬೀನ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾನೆ. ಈ ಸಂಬಂಧ ಇಲ್ಲಿನ ರೋಜಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ ಮುಖ್ಯಶಿಕ್ಷಕಿ
Date:






