ರಾಮನ ವಿಗ್ರಹಕ್ಕೆ ಗೊಂಬೆ ಎಂದ ಸಚಿವ ಕೆಎನ್ ರಾಜಣ್ಣ !

Date:

ತುಮಕೂರು: ಅಯೋಧ್ಯೆಯ ರಾಮಲಲ್ಲಾನ ಬಗ್ಗೆ ನನಗೆ ಏನೂ ಅನಿಸಲೇ ಇಲ್ಲ ಎಂದು ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಸಚಿವ ಕೆಎನ್ ರಾಜಣ್ಣ ಅಯೋಧ್ಯೆ ರಾಮಲಲ್ಲಾ ಬಗ್ಗೆ ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಹೌದು ತುಮಕೂರಿನಲ್ಲಿ ನಡೆದ ಹಿಂದುಳಿದ ವರ್ಗಗಳ ಒಕ್ಕೂಟದ ಸಮಾರಂಭದಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಕೆಡವಿದ್ದ ನಂತರ ಅಲ್ಲಿಗೆ ಹೋಗಿದ್ದೆ. ಗುಡಿಯೊಂದರಲ್ಲಿ ಎರಡು ಗೊಂಬೆಗಳನ್ನಿಟ್ಟು ರಾಮ ರಾಮ ಎನ್ನುತ್ತಿದ್ದರು. ನಮ್ಮೂರಿನ ದೇವಸ್ಥಾನಗಳಿಗೆ ಹೋದಾಗ ಸಿಗುವ ಭಕ್ತಿಯ ಮತ್ತು ಧನಾತ್ಮಕ ಅನುಭೂತಿ ಅಲ್ಲಿರಲಿಲ್ಲ. ಅಯೋಧ್ಯೆಯ ರಾಮಲಲ್ಲಾನ ಬಗ್ಗೆ ನನಗೆ ಏನೂ ಅನಿಸಲೇ ಇಲ್ಲ ಎಂದು ಹೇಳಿದ್ದಾರೆ.

ನಮ್ಮಲ್ಲಿ ಸಾವಿರಾರು ವರ್ಷಗಳ ಇತಿಹಾಸವಿರುವ ಅನೇಕ ರಾಮ ದೇಗುಲಗಳಿವೆ. ಆದರೆ, ಬಿಜೆಪಿ ಚುನಾವಣೆಗಾಗಿ ದೇಗುಲ ಕಟ್ಟುತ್ತಿದೆ. ಬಿಜೆಪಿ ಜನರನ್ನು ಮೋಸ ಮಾಡುತ್ತಿದೆ ಎಂದು ರಾಜಣ್ಣ ಟೀಕಿಸಿದ್ದಾರೆ. ರಾಜಣ್ಣ ಹೇಳಿಕೆಗೆ ಇದೀಗ ಆಕ್ರೋಶ ವ್ಯಕ್ತವಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ ಹತ್ಯೆ!

ಕಜ್ಜಾಯ ಕೊಡ್ತೀನಿ ಅಂತ ಕರೆದು ಕೊಲೆ: ದೃಶ್ಯ ಸಿನಿಮಾ ಶೈಲಿಯಲ್ಲಿ ವೃದ್ಧೆಯ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಗೃಹ ಸಚಿವರ ಪರಮೆಶ್ವರ್​ ಗರಂ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ಗೃಹ ಸಚಿವರ ಪರಮೆಶ್ವರ್​ ಗರಂ ಬೆಂಗಳೂರು,...

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ

ರಾತ್ರಿ ಕೆಟ್ಟ ಕನಸುಗಳು ಬೀಳುವುದಕ್ಕೆ ಕಾರಣವಿದೆ! ತಡೆಯಲು ಹೀಗೆ ಮಾಡಿ ಕೆಟ್ಟ ಕನಸುಗಳು...

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ ಸಿದ್ದರಾಮಯ್ಯ

ನಾವು ಪ್ರಜಾಪ್ರಭುತ್ವ ರಕ್ಷಣೆಗೆ, ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟ ಕಟ್ಟುತ್ತೇವೆ: ಸಿಎಂ...