ಬೆಂಗಳೂರು: ಲೋಕಸಭೆ ಚುನಾವಣೆ ಸಂಬಂಧ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯನ್ನು ನಾಳೆ ಸಂಜೆ 4.30 ಕ್ಕೆ ಕ್ವೀನ್ಸ್ ರಸ್ತೆಯ ಇಂದಿರಾ ಗಾಂಧಿ ಭವನದಲ್ಲಿ ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧ ಆವರಣದಲ್ಲಿಮಾತನಾಡಿದ ಅವರು,
ಲೋಕಸಭೆ ಚುನಾವಣೆ ಸಂಬಂಧ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆಯನ್ನು ನಾಳೆ ಸಂಜೆ 4.30 ಕ್ಕೆ ಕ್ವೀನ್ಸ್ ರಸ್ತೆಯ ಇಂದಿರಾ ಗಾಂಧಿ ಭವನದಲ್ಲಿ ನಡೆಸಲಾಗುವುದು. ಮೊದಲಿಗೆ ಮಧ್ಯಾಹ್ನ ಸಭೆ ಮಾಡಲು ಆಲೋಚನೆ ಮಾಡಿದ್ದೆವು. ಪ್ರಧಾನ ಮಂತ್ರಿಗಳು ರಾಜ್ಯಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಭೆಯನ್ನು ಸಂಜೆ ನಡೆಸುತ್ತಿದ್ದೇವೆ” ಎಂದು ತಿಳಿಸಿದರು.
ಇನ್ನೂ ನಿಗಮ, ಮಂಡಳಿಗಳ ನೇಮಕ ಪಟ್ಟಿಯಲ್ಲಿ 36 ಶಾಸಕರು, 39 ಕಾರ್ಯಕರ್ತರಿಗೆ ಸ್ಥಾನ ನೀಡಲಾಗಿದೆ. ಯಾವುದೇ ಕ್ಷಣದಲ್ಲಿ ನಿಗಮ, ಮಂಡಳಿಗಳ ನೇಮಕ ಪಟ್ಟಿ ಬಿಡುಗಡೆ ಆಗಲಿದೆ. ನಮ್ಮ ನಾಯಕರು ಹಾಗೂ ಕಾರ್ಯಕರ್ತರು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದು, ಅವರ ಹಕ್ಕಿನಂತೆ ಈ ಅಧಿಕಾರ ನೀಡಲಾಗುತ್ತಿದೆ ಎಂದರು.
ಯಾವುದೇ ಕ್ಷಣದಲ್ಲಿ ನಿಗಮ, ಮಂಡಳಿಗಳ ನೇಮಕ ಪಟ್ಟಿ ಬಿಡುಗಡೆ ಆಗಲಿದೆ !
Date: