ಊರಿಗೆಲ್ಲಾ ಉಪದೇಶ ಮಾಡುತ್ತೀರಿ, ನಿಮ್ಮ ಕಾರ್ಯಕರ್ತರಿಗೆ ಬುದ್ದಿ ಹೇಳಿ !

Date:

ಬೆಂಗಳೂರು: ಶಾಸಕರನ್ನು ಪ್ರಶ್ನಿಸಿದರು ಎನ್ನುವ ಕಾರಣಕ್ಕೆ ಚಿಕ್ಕಬಳ್ಳಾಪುರದ ಜೆಡಿಎಸ್ ಕಾರ್ಯಕರ್ತರೊಬ್ಬರಿಗೆ ಜೀವ ಬೆದರಿಕೆ ಒಡ್ಡಿರುವ ಪ್ರದೀಪ್ ಈಶ್ವರ್ ಬೆಂಬಲಿಗರನ್ನು ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಜಾತ್ಯತೀತ ಜನತಾದಳ ಆಗ್ರಹಪಡಿಸಿದೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಜೆಡಿಎಸ್,
ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೀದಿ ರೌಡಿಗಳಂತೆ ವರ್ತಿಸಿ ನಮ್ಮ ಕಾರ್ಯಕರ್ತರ ಮೇಲೆ ಧಮ್ಕಿ ಹಾಕಿ, ಜೀವ ಬೆದರಿಕೆ ಒಡ್ಡುತ್ತಿರುವ ಘಟನೆಗಳು ಗಮನಕ್ಕೆ ಬಂದಿವೆ. ಚಿಕ್ಕಬಳ್ಳಾಪುರ ಕ್ಷೇತ್ರ ಜನರ ಸ್ವತ್ತೇ ಹೊರತು ಶಾಸಕರಾದ ಪ್ರದೀಪ್ ಈಶ್ವರ್ ಅಥವಾ ಕಾಂಗ್ರೆಸ್ ಪಕ್ಷದ ಜಹಗೀರಲ್ಲ. ಈ ಅಂಶವನ್ನು ಕಾಂಗ್ರೆಸ್ ಗೂಂಡಾಗಳು ಅರ್ಥ ಮಾಡಿಕೊಂಡರೆ ಒಳಿತು ಎಂದು ಎಚ್ಚರಿಕೆ ನೀಡಿದೆ.
ಹಿರಿಯ ಸಹಕಾರಿ ಧುರೀಣರು, ಮಾಜಿ ಶಾಸಕರು ಹಾಗೂ ನಮ್ಮ ಗೌರವಾನ್ವಿತ ನಾಯಕರು, ಜನಾನುರಾಗಿಗಳು ಆಗಿದ್ದ ಶ್ರೀ ಕೆ.ಬಿ.ಪಿಳ್ಳಪ್ಪನವರ ವಿಗ್ರಹ ಸ್ಥಾಪನೆ ಮಾಡುವ ಬಗ್ಗೆ ಸ್ವತಃ ಶಾಸಕ ಪ್ರದೀಪ್ ಈಶ್ವರ್ ಅವರೇ ನೀಡಿದ್ದ ಭರವಸೆಯನ್ನು ಆರು ತಿಂಗಳಾದರೂ ಈಡೇರಿಸದ ಬಗ್ಗೆ ನಮ್ಮ ಕಾರ್ಯಕರ್ತ ಅಕಿಲ್ ರೆಡ್ಡಿ ಅವರು ಪ್ರಶ್ನೆ ಮಾಡಿದ್ದಾರೆ. ಪ್ರಶ್ನಿಸುವುದೇ ಅಪರಾಧವೇ? ಶಾಸಕರು ಪ್ರಶ್ನಾತೀತರೇ? ಧಮ್ಕಿ, ಬೆದರಿಕೆ ಹಾಕಿರುವ ವರ್ತನೆ ಖಂಡನೀಯ ಎಂದು ಜೆಡಿಎಸ್ ಕಿಡಿಕಾರಿದೆ

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...