No menu items!
20.3 C
Munich
Friday, August 21, 2026

ಕಾಂಗ್ರೆಸ್ ಪಕ್ಷದಲ್ಲಿ ಶೆಟ್ಟರ್ʼಗೆ ಯಾವುದೇ ಅನ್ಯಾಯ ಆಗಿಲ್ಲ !

Must read

ಕೊಡಗು: ಕಾಂಗ್ರೆಸ್ ಪಕ್ಷದಲ್ಲಿ ಶೆಟ್ಟರ್ʼಗೆ ಯಾವುದೇ ಅನ್ಯಾಯ ಆಗಿಲ್ಲ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ. ಜಗದೀಶ್ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆಯಾಗಿರುವ ವಿಚಾರಕ್ಕೆ ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಅವರಿಗೆ ಟಿಕೆಟ್ ಕೊಟ್ಟಿದ್ದೆವು. ಚುನಾವಣೆಯಲ್ಲಿ ಸೋತರೂ ಶೆಟ್ಟರನ್ನು ಎಂಎಲ್ಸಿ ಮಾಡಿದ್ದೆವು. ಕಾಂಗ್ರೆಸ್ ಪಕ್ಷದಲ್ಲಿ ಅವರಿಗೆ ಯಾವುದೇ ಅನ್ಯಾಯ ಆಗಿಲ್ಲ. ಒಮ್ಮೆ ಅವರು ನನಗೆ ಬಿಜೆಪಿಯಲಿ ಅವಮಾನ ಆಗಿದೆ ಮತ್ತೆ ಹೋಗಲ್ಲ ಎಂದಿದ್ದರು ಎಂದು ತಿಳಿಸಿದ್ದಾರೆ. ಇನ್ನು ನಿಗಮ‌ ಮಂಡಳಿ‌ ನೇಮಕ ವಿಚಾರ ಸಂಬಂಧ ಮಾತನಾಡಿದ ಸಿಎಂ, ನಾವೇನು ಗುಲಾಮರಾ ಎಂಬ ಸಚಿವ ಕೆ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಒಬ್ವೊಬ್ಬರು ಒಂದೊಂದು ಹೆಸರನ್ನ ಸಜೆಸ್ಟ್ ಮಾಡ್ತಾರೆ. ಈ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತೆ ಎಂದು ತಿಳಿಸಿದ್ದಾರೆ.

- Advertisement -spot_img

More articles

- Advertisement -spot_img

Latest article