No menu items!
12.1 C
Munich
Thursday, May 7, 2026

ಗುಂಡು ಹಾರಿಸಿ ಮಗನನ್ನು ಹತ್ಯೆಗೈದ ತಂದೆ..!

Must read

ಬೆಂಗಳೂರು: ಕುಡಿಯೋದಕ್ಕೆ ಹಣ ಕೊಡ್ಲಿಲ್ಲ ಎಂಬ ಕಾರಣಕ್ಕೆ ತಂದೆಯೇ ಮಗನನ್ನು ಗುಂಡು ಹಾರಿಸಿ ಕೊಲೆಗೈದ ದಾರುಣ ಘಟನೆ ಬೆಂಗಳೂರಿನ ಕರೆಕಲ್‍ನಲ್ಲಿ ನಡೆದಿದೆ. ನರ್ತನ್ ಬೋಪಣ್ಣ (32) ಹತ್ಯೆಯಾದ ವ್ಯಕ್ತಿಯಾಗಿದ್ದಾರೆ. ಅವರ ತಂದೆ ಸುರೇಶ್ ವಿನಾಕಾರಣ ಬಂದೂಕಿನಿಂದ ಗುಂಡು ಹಾರಿಸಿದ್ದಾನೆ ಎಂದು ತಿಳಿದುಬಂದಿದೆ. ಗುಂಡೇಟಿನಿಂದ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ದ ಅವರನ್ನು ಕೂಡಲೇ ಪೊಲೀಸರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.


ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವಿಗೀಡಾಗಿದ್ದಾರೆ. ನರ್ತನ್ ಅವರ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಬಳಿಕ ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -spot_img

More articles

- Advertisement -spot_img

Latest article