ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ

Date:

ವಿಜಯಪುರ: ವಿಜಯಪುರ ಜಿಲ್ಲೆಯ 2 ಕಡೆ ಮತ್ತೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.9 ರಷ್ಟು ತೀವ್ರತೆ ದಾಖಲಾಗಿದೆ. ತಾಲೂಕಿನ ಮನಗೂಳಿ ಪಟ್ಟಣದಲ್ಲಿ ನಿನ್ನೆ ತಡರಾತ್ರಿ 12.22 ನಿಮಿಷಕ್ಕೆ ಹಾಗೂ ರಾತ್ರಿ‌ 1.20 ನಿಮಿಷಕ್ಕೆ ಎರಡು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ಭೂಕಂಪದ ತೀರ್ವತೆಯನ್ನು ರಿಕ್ಟರ್ ಮಾಪಕದಲ್ಲಿ 2.9 ಎಂದು ಅಳೆಯಲಾಗಿದೆ. ಭೂಮಿಯ 5 ಕಿ.ಮೀ ಆಳದಲ್ಲಿ ಭೂಮಿ ಕಂಪಿಸಿದೆ.
ಭೂಕಂಪನದಿಂದ ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಮನೆಯಲ್ಲಿನ ಸಾಮಾಗ್ರಿಗಳು ಚಲ್ಲಾಪಿಲ್ಲಿಯಾಗಿವೆ. ಪದೇ ಪದೆ ಭೂಕಂಪನದಿಂದ ಜನತೆ ಆತಂಕಗೊಂಡಿದ್ದಾರೆ. ವಿಜಯಪುರದಲ್ಲಿ ಪದೇಪದೆ ಭೂಕಂಪನ ಅನುಭವವಾಗುತ್ತಿದ್ದು, ಕಳೆದ ವರ್ಷವಂತೂ ಸುಮಾರು ಹತ್ತಕ್ಕೂ ಹೆಚ್ಚು ಸಲ ಈ ಪ್ರದೇಶದಲ್ಲಿ ಕಂಪನಗಳು ಸಂಭವಿಸಿದ್ದವು. ಇದೀಗ ಹೊಸ ವರ್ಷದಲ್ಲಿ ಮೊದಲ ಭೂಕಂಪನದ ಅನುಭವವಾಗಿದೆ ಎನ್ನುತ್ತಾರೆ ಸ್ಥಳೀಯರು.

Share post:

Subscribe

spot_imgspot_img

Popular

More like this
Related

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...