No menu items!
14.6 C
Munich
Tuesday, May 5, 2026

ವಿಷಾದ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯಗೆ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ

Must read

ಬೆಂಗಳೂರು: ಸಾರ್ವಜನಿಕ ಸಭೆಯಲ್ಲಿ ರಾಷ್ಟ್ರಪತಿಗಳನ್ನು ವಿವೇಚನೆ ಇಲ್ಲದೆ ಏಕವಚನದಲ್ಲಿ ಸಂಬೋಧಿಸಿ, ಈಗ ವಿಷಾದ ವ್ಯಕ್ತಪಡಿಸಿದರೆ ಆಗುತ್ತದೆಯೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು; ಅಂಕೆ ಮೀರಿದ ಭಂಡತನಕ್ಕೆ ಮುಖ್ಯಮಂತ್ರಿ ನೀವೇ ಅತ್ಯುತ್ತಮ ಉದಾಹರಣೆ ಸಿದ್ದರಾಮಯ್ಯನವರೇ. ಭಾವುಕನಾಗಿ ಮಾತನಾಡುವ ಭರದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದೆ ಎಂದು ನೀವು ಕೊಟ್ಟಿರುವ ಸಮಜಾಯಿಷಿ ಮೊಸಳೆಯನ್ನೂ ನಾಚಿಸುವಂತಿದೆ ಎಂದಿದ್ದಾರೆ ಅಲ್ಲದೆ, ಶಿಷ್ಟಾಚಾರಗೆಟ್ಟ ಮುಖ್ಯಮಂತ್ರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಗ್ರಾಮೀಣ ಸೊಗಡಿನ ವ್ಯಕ್ತಿತ್ವ ನನ್ನದು. ನಾನು ಮಾತನಾಡುವುದೇ ಹಾಗೆ..” ಎಂದು ನೀವು ಸಮರ್ಥಿಸಿಕೊಳ್ಳುತ್ತಿರಿ. ಸಮರ್ಥನೆಗೂ ಒಂದು ಅಳತೆ, ಗೌರವ ಇರುತ್ತದೆ. ಅದಾವುದನ್ನೂ ನೀವು ಲೆಕ್ಕಕ್ಕೇ ಇಟ್ಟಿಲ. ಹೌದಲ್ಲವೇ? ಎಂದು ಸಿಎಂ ಅವರನ್ನು ಪ್ರಶ್ನೆ ಮಾಡಿರುವ ಸಿದ್ದರಾಮಯ್ಯ ಅವರು; 2ನೇ ಸಲ ಸಿಎಂ ಆಗಿ ಎಲ್ಲಾ ರೀತಿಯ ಶಿಷ್ಟಾಚಾರದ ಸುಖ ಅನುಭವಿಸುತ್ತಿದ್ದೀರಿ ಮತ್ತು ಪಾಲಿಸುತ್ತಿದ್ದೀರಿ, ಸರಿ. ಆದರೆ; ಭಾಷೆ ವಿಚಾರದಲ್ಲಿ ನೀವು ಯಾಕೆ ಶಿಷ್ಟಾಚಾರ ಕಲಿತಿಲ್ಲ, ಪಾಲಿಸುತ್ತಿಲ್ಲ? ನಿಮ್ಮ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ಏಕವಚನ ಪ್ರಯೋಗಿಸುವಿರಾ? ಈ ಸೋಗಲಾಡಿತನವನ್ನು ಅರ್ಥ ಮಾಡಿಕೊಳ್ಳದಷ್ಟು ಮುಗ್ಧರೇ ನಮ್ಮ ಜನರು ಎಂದು ಕಿಡಿಕಾರಿದ್ದಾರೆ.

- Advertisement -spot_img

More articles

- Advertisement -spot_img

Latest article