ಮುಂದಿನ 5 ವರ್ಷಗಳಲ್ಲಿ 2 ಕೋಟಿ ಹೆಚ್ಚಿನ ಮನೆಗಳನ್ನು ನಿರ್ಮಾಣ !

Date:

ನವದೆಹಲಿ: ಜೈಜವಾನ್, ಜೈಕಿಸಾನ್, ಜೈವಿಜ್ಞಾನ, ಜೈ ಅನುಸಂಧಾನ ಎಂಬ ಪ್ರಧಾನಿ ಮೋದಿ ಅವರ ಘೋಷಣೆಯಡಿ ಕಾರ್ಯನಿರ್ವಹಿಸುತ್ತೇವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ನಲ್ಲಿ ಹೇಳಿದ್ದಾರೆ. ಬಡವರು, ಮಹಿಳೆಯರು, ಯುವಜನತೆ ಮತ್ತು ರೈತರು ನಮ್ಮ ಸರ್ಕಾರದ 4 ಜಾತಿಗಳು. ಈ ನಾಲ್ಕು ಜಾತಿಗಳ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಕೋವಿಡ್‌ ಸವಾಲುಗಳ ನಡುವೆಯೂ, ಪ್ರಧಾನಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಅನುಷ್ಠಾನವು ಮುಂದುವರೆದಿದೆ ಮತ್ತು ನಾವು 3 ಕೋಟಿ ಮನೆಗಳ ಗುರಿಯನ್ನು ಸಾಧಿಸುವ ಸಮೀಪದಲ್ಲಿ ಇದ್ದೇವೆ. ಕುಟುಂಬಗಳ ಸಂಖ್ಯೆಯಲ್ಲಿನ ಹೆಚ್ಚಳದಿಂದ ಉಂಟಾಗುವ ಅವಶ್ಯಕತೆಗಳನ್ನು ಪೂರೈಸಲು ಮುಂದಿನ 5 ವರ್ಷಗಳಲ್ಲಿ 2 ಕೋಟಿ ಹೆಚ್ಚಿನ ಮನೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಘೋಷಿಸಿದರು.
ಪ್ರಧಾನಮಂತ್ರಿ ಮುದ್ರಾ ಯೋಜನೆಯ ಅಡಿ 43 ಕೋಟಿ ರೂ.ಗಳ ಸಾಲವನ್ನು ಮಂಜೂರು ಮಾಡಿದೆ. ಸ್ಟಾರ್ಟ್‌ಅಪ್ ಇಂಡಿಯಾ ಮತ್ತು ಸ್ಟಾರ್ಟ್‌ಅಪ್ ಕ್ರೆಡಿಟ್ ಗ್ಯಾರಂಟಿ ಯೋಜನೆಗಳು ನಮ್ಮ ಯುವಕರಿಗೆ ಸಹಾಯ ಮಾಡುತ್ತಿವೆ ಎಂದು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಹೆಂಡತಿಯ 2ನೇ ಮದುವೆ ಸಂಭ್ರಮದ ಬೆನ್ನಲ್ಲೇ ಗಂಡನ ಶವ ಹೊರಕ್ಕೆ!

ಹೆಂಡತಿಯ 2ನೇ ಮದುವೆ ಸಂಭ್ರಮದ ಬೆನ್ನಲ್ಲೇ ಗಂಡನ ಶವ ಹೊರಕ್ಕೆ! ತುಮಕೂರು: ಗಂಡ...

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ಜಾಮೀನು ನವದೆಹಲಿ: ಧಾರವಾಡ...

ಬಾಡಿ ಕ್ಯಾಮೆರಾ ಕಡ್ಡಾಯ: ಪಾಸ್ ಪೋರ್ಟ್ ವೆರಿಫಿಕೇಶನ್ʼಗೆ ಹೊಸ ರೂಲ್ಸ್!

ಬಾಡಿ ಕ್ಯಾಮೆರಾ ಕಡ್ಡಾಯ: ಪಾಸ್ ಪೋರ್ಟ್ ವೆರಿಫಿಕೇಶನ್ʼಗೆ ಹೊಸ ರೂಲ್ಸ್! ಬೆಂಗಳೂರು: ಡಿಜಿ...

ರಾಜ್ಯದಲ್ಲಿ ಮಳೆ–ಬಿಸಿಲಿನ ಮಿಶ್ರ ಹವಾಮಾನ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಮಳೆ–ಬಿಸಿಲಿನ ಮಿಶ್ರ ಹವಾಮಾನ: 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಬೆಂಗಳೂರು: ರಾಜ್ಯದಲ್ಲಿ...