ಬೆಂಗಳೂರು: ಕೆ.ಎಸ್.ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 2022ರಲ್ಲಿ ಪ್ರತಿಭಟನೆ ನಡೆಸಿ ರಸ್ತೆ ತಡೆ ಮಾಡುವ ಮೂಲಕ ಸಾರ್ವಜನಿಕರಿಗೆ ಅಡ್ಡಿ ಮಾಡಿದ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ನಾಯಕರಿಗೆ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿದೆ.
ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡಿದ ಹಿನ್ನೆಲೆಯಲ್ಲಿ ನ್ಯಾಯಾಲಯ ಸಿದ್ದರಾಮಯ್ಯ, ಸುರ್ಜೆವಾಲಾ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ದಂಡ ವಿಧಿಸಿದೆ. ಸಿದ್ದರಾಮಯ್ಯನವರಿಗೆ ಮಾರ್ಚ್ 6 ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಬೆಂಗಳೂರು ನಗರದಲ್ಲಿ ಎಲ್ಲೆಂದರಲ್ಲಿ ಪ್ರತಿಭಟನೆ ನಡೆಸುವಂತಿಲ್ಲ. ಪೊಲೀಸರಿಂದ ಅನುಮತಿ ಪಡೆದವರಿಗೆ ಮಾತ್ರ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟಿಸಲು ಅವಕಾಶ ನೀಡಲಾಗುತ್ತದೆ. ಬೇರೆ ಕಡೆ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾದಲ್ಲಿ ಕೇಸ್ ಹಾಕಲಾಗುತ್ತದೆ.
ಸಿಎಂ ಸಿದ್ದರಾಮಯ್ಯಗೆ 10 ಸಾವಿರ ದಂಡ ವಿಧಿಸಿದ ಕೋರ್ಟ್!
Date: