ಕಾಂಗ್ರೆಸ್ ಗೆ ಬಿಜೆಪಿ ಟಕ್ಕರ್ – ಇಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ!

Date:

ಬೆಂಗಳೂರು:- ದಿಲ್ಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಪ್ರತಿಯಾಗಿ ರಾಜ್ಯದಲ್ಲಿ ಸರ್ಕಾರದ ವಿರುದ್ಧ ಇಂದು ಬಿಜೆಪಿ ಪ್ರತಿಭಟನೆ ನಡೆಸಲಿದೆ.

ರಾಜ್ಯದ ಕಾಂಗ್ರೆಸ್ ಸರ್ಕಾರ ಸ್ವತಃ 222ಕ್ಕೂ ಹೆಚ್ಚು ತಾಲೂಕುಗಳನ್ನು ಬರಗಾಲ ಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿದ್ದರೂ, ಈವರೆಗು ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಬರ ಪರಿಹಾರದ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರುಗಳ ನೇತೃತ್ವದಲ್ಲಿ ಇಂದು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆ ನಡೆಸಲಾಗುವುದು” ಎಂದು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟ್ವೀಟ್​ ಮಾಡಿದ್ದಾರೆ.

ಇನ್ನು ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಿಜೆಪಿ ಟ್ವೀಟ್​ ಮೂಲಕ ವಾಗ್ದಾಳಿ ನಡೆಸಿದೆ. “ಕರ್ನಾಟಕದ ಜನತೆ ಕಾಂಗ್ರೆಸ್​ಗೆ ಮತ ನೀಡಿದ್ದು ಗ್ಯಾರಂಟಿಗಳನ್ನು ನಂಬಿ! ಆದರೆ, ಮಜಾವಾದಿ ಸಿದ್ದರಾಮಯ್ಯ ಅವರ ಸರ್ಕಾರ ಕನ್ನಡಿಗರ ತೆರಿಗೆ ದುಡ್ಡಿನಲ್ಲಿ ಮೋಜು ಮಸ್ತಿ ಮಾಡುತ್ತಿದೆ. ಕನ್ನಡಿಗರ ತೆರಿಗೆ ಹಣದಲ್ಲಿ ಬಿಟ್ಟಿ ಜಾಹೀರಾತು ಕೊಟ್ಟು ಪ್ರಚಾರ ಪಡೆದುಕೊಂಡು ದೆಹಲಿಯಲ್ಲಿ ಶೋಕಿ ಮಾಡಲು ಹೋಗಿದೆ. ಕನ್ನಡಿಗರ ಪ್ರಶ್ನೆಗಳಿಗೆ ಉತ್ತರ ಕೊಡಲು ಯೋಗ್ಯತೆ ಇಲ್ಲದ ಕಾಂಗ್ರೆಸ್ಸಿಗರು, ತಾವೇ ಮಾಡಿದ ಸುಳ್ಳುಗಳಿಗೆ ಸತ್ಯ ಹುಡುಕುತ್ತಿದ್ದಾರೆ. ಜಂತರ್‌ ಮಂತರ್‌ನಲ್ಲಿ ಬೃಹನ್ನಳೆ ನಾಟಕ ಮಾಡಲು ಮೇಕಪ್‌ ಹಾಕಿ ಕೂತಿದ್ದಾರೆ ಎಡಬಿಡಂಗಿ ಕಾಂಗ್ರೆಸ್ಸಿಗರು” ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್​ ಮಾಡಿದೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...