ರಾಜ್ಯಸಭೆಗೆ ಮನಮೋಹನ್‌ ಸಿಂಗ್‌ ನೀಡಿದ ಕೊಡುಗೆ ಶ್ಲಾಘಿಸಿದ ಮೋದಿ

Date:

ನವದೆಹಲಿ: ನಾನು ಇಂದು ಮನಮೋಹನ್‌ ಸಿಂಗ್‌ ಅವರನ್ನು ಸ್ಮರಿಸುತ್ತೇನೆ. ಅವರ ಕೊಡುಗೆ ಅಪಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರನ್ನು ಹಾಡಿ ಹೊಗಳಿದ್ದಾರೆ. ನಿವೃತ್ತರಾಗಲಿರುವ ರಾಜ್ಯಸಭಾ ಸದಸ್ಯರ ಬೀಳ್ಕೊಡುಗೆ ಸಂದರ್ಭದಲ್ಲಿ ಸದನವನ್ನುದ್ದೇಶಿಸಿ ಮಾತನಾಡಿದ ಮೋದಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೇಶಕ್ಕೆ ಸಲ್ಲಿಸಿದ ಕೊಡುಗೆ ಹಾಗೂ ಪ್ರಜಾಪ್ರಭುತ್ವದ ಬಗ್ಗೆ ಅವರಿಗಿರುವ ಬದ್ಧತೆಯನ್ನು ಶ್ಲಾಘಿಸಿದರು.
ನಾನು ಇಂದು ಮನಮೋಹನ್‌ ಸಿಂಗ್‌ ಅವರನ್ನು ಸ್ಮರಿಸುತ್ತೇನೆ. ಅವರ ಕೊಡುಗೆ ಅಪಾರವಾಗಿದೆ. ಡಾ.ಮನಮೋಹನ್ ಸಿಂಗ್ ಅವರು ಇಷ್ಟು ದಿನ ಈ ಸದನ ಮತ್ತು ದೇಶಕ್ಕೆ ಮಾರ್ಗದರ್ಶನ ನೀಡಿದ ರೀತಿ ಸದಾ ನೆನಪಿನಲ್ಲಿ ಉಳಿಯುತ್ತದೆ ಎಂದರು. ಸದನದಲ್ಲಿ ಮತದಾನದ ವೇಳೆ ಆಡಳಿತ ಪಕ್ಷವೇ ಗೆಲ್ಲುತ್ತದೆ ಎಂದು ಗೊತ್ತಿದ್ದರೂ ಡಾ.ಮನಮೋಹನ್ ಸಿಂಗ್ ವ್ಹೀಲ್‌ ಚೇರ್‌ನಲ್ಲಿ ಬಂದು ಮತ ಚಲಾಯಿಸಿದ್ದು ಕೂಡ ನನಗೆ ಚೆನ್ನಾಗಿ ನೆನಪಿದೆ.
ಅವರು ಯಾರಿಗೆ ಅಧಿಕಾರ ಕೊಡಲು ಬಂದಿದ್ದರು ಎಂಬುದು ಪ್ರಶ್ನೆಯಲ್ಲ. ಅವರು ಪ್ರಜಾಪ್ರಭುತ್ವಕ್ಕೆ ಶಕ್ತಿ ನೀಡಲು ಬಂದಿದ್ದರು ಎಂದು ನಾನು ನಂಬುತ್ತೇನೆ ಎಂದಿದ್ದಾರೆ. ಸದಸ್ಯರು ತಮ್ಮ ಕರ್ತವ್ಯಗಳ ಬಗ್ಗೆ ಎಚ್ಚರವಾಗಿರುವುದಕ್ಕೆ ಇದು ಒಂದು ಉತ್ತಮ ಉದಾಹರಣೆಯಾಗಿದೆ. ಅಲ್ಲದೇ ಮನಮೋಹನ್ ಸಿಂಗ್ ಎಲ್ಲ ಸಂಸದರಿಗೆ ಸ್ಫೂರ್ತಿ ಎಂದು ಮೋದಿ ಬಣ್ಣಿಸಿದರು.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...