ನವದೆಹಲಿ: ಲೋಕಸಭೆ ಚುನಾವಣೆಗೆ ಈಗಾಗಲೇ ಪಕ್ಷಗಳಿಂದ ಸಿದ್ದತೆ ಆರಂಭಗೊಂಡಿದೆ. ಮಂಡ್ಯ ಕ್ಷೇತ್ರ ಕೂಡ ಚುನಾವಣೆಗೆ ರಂಗೇರಿದ್ದು, ಈ ಬೆನ್ನಲ್ಲೇ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿಯ ಸಮಯದಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಿದ್ದಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ಮುಂದಿನ ಅವಧಿಯಲ್ಲಿಯೂ ಸಹ, ನಮ್ಮ ರಾಜ್ಯ ಮತ್ತು ರಾಷ್ಟ್ರದ ಸೇವೆಯಲ್ಲಿ ನಿಮ್ಮೊಂದಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ-ಜೆಡಿಎಸ್ ಮಧ್ಯೆ ಯಾರಿಗೆ ಟಿಕೆಟ್ ಸಿಗಲಿದೆ ಎನ್ನುವುದು ಇನ್ನೂ ಫೈನಲ್ ಆಗಿಲ್ಲ. ಈ ಹಿಂದೆ ಸುಮಲತಾ ಅಂಬರೀಶ್ ಅವರು ನಾನು ಈ ಬಾರಿ ಕಣಕ್ಕೆ ಇಳಿಯುತ್ತೇನೆ ಎಂದು ಹೇಳಿದ್ದರು. ಮೋದಿ ಭೇಟಿಗೂ ಮೊದಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರನ್ನು ಭೇಟಿಯಾಗಿದ್ದರು.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಸುಮಲತಾ ಅಂಬರೀಶ್
Date: