No menu items!
18.9 C
Munich
Wednesday, May 6, 2026

ದೆಹಲಿ ಚಲೋ: ರೈತರ ಮೇಲೆ ಅಶ್ರುವಾಯು ಪ್ರಯೋಗ

Must read

ನವದೆಹಲಿ: ಹರ್ಯಾಣ-ಪಂಜಾಬ್‌ ಗಡಿಯಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಹರ್ಯಾಣ ಪೊಲೀಸರು ಅಶ್ರುವಾಯು ಪ್ರಯೋಗ ಮಾಡಿ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಹೌದು ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದೆಹಲಿ ಚಲೋ ಹಮ್ಮಿಕೊಂಡಿರುವ ರೈತರ ಮೇಲೆ ಶಂಭು ಗಡಿಯಲ್ಲಿ ಪೊಲೀಸರು ಅಶ್ರುವಾಯು ಪ್ರಯೋಗ ಮಾಡಿದ್ದಾರೆ.
ರೈತರ ಗುಂಪಿನ ಮಧ್ಯೆ ಪೊಲೀಸರಿಗೆ ಹೋಗಲು ಸಾಧ್ಯವಿಲ್ಲದ ಕಾರಣ ಡ್ರೋನ್‌ ಮೂಲಕ ಟಿಯರ್‌ ಗ್ಯಾಸ್‌ ಶೆಲ್‌ಗಳನ್ನು ಬೀಳಿಸಿ ರೈತರನ್ನು ಚದುರಿಸಲಾಗುತ್ತಿದೆ.ಉತ್ತರ ಪ್ರದೇಶ,ಹರ್ಯಾಣ ಮತ್ತು ಪಂಜಾಬ್‌ ಭಾಗಗಳಿಂದ ಭಾರಿ ಸಂಖ್ಯೆಯ ರೈತರು ದೆಹಲಿಯತ್ತ ಧಾವಿಸುತ್ತಿದ್ದಾರೆ. ಆದರೆ ಅವರು ರಾಷ್ಟ್ರ ರಾಜಧಾನಿಯನ್ನು ಪ್ರವೇಶಿಸದಂತೆ ತಡೆಯಲು ಸಿಂಘು, ಟಿಕ್ರಿ, ಗಾಜೀಪುರ ಗಡಿಯಲ್ಲಿ ಹಲವು ಹಂತಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಲಾಗಿದೆ.

- Advertisement -spot_img

More articles

- Advertisement -spot_img

Latest article