ವಾಹನ ಮಾಲೀಕರಿಗೆ ಗುಡ್‌ ನ್ಯೂಸ್‌: HSRP ನಂಬರ್ ಪ್ಲೇಟ್ ಅಳವಡಿಕೆಗೆ ಅವಧಿ ವಿಸ್ತರಣೆ

Date:

ಬೆಂಗಳೂರು: ವಾಹನ ಮಾಲೀಕರಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ಕೊಟ್ಟಿದೆ. ಹೌದು ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ ಮಾಡುವುದಾಗಿ ಸರ್ಕಾರ ಘೋಷಣೆ ಮಾಡಿದೆ. ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ನ ಸದಸ್ಯ ಮಧು ಜಿ ಮಾದೇಗೌಡ ಪ್ರಶ್ನೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಉತ್ತರ ನೀಡಿದರು. ಹೈ ಸೆಕ್ಯುರಿಟಿ‌ ನಂಬರ್ ಪ್ಲೇಟ್ ಅಳವಡಿಕೆಗೆ ಫೆಬ್ರವರಿ 17, 2024ಕಕ್ಕೆ ಗಡುವು ಮುಕ್ತಾಯವಾಗಲಿದೆ. ಹೀಗಾಗಿ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ ಮಾಡುತ್ತೇವೆ ಎಂದರು.
ರಾಜ್ಯದಲ್ಲಿ ಈಗಾಗಲೇ 18,32,787 ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ರಾಜ್ಯದಲ್ಲಿ 9.16%. ಮಾತ್ರ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ. ಬೇರೆ ರಾಜ್ಯಗಳಲ್ಲಿ ಇದು ವೇಗವಾಗಿ ಆಗಿದೆ. ನಮ್ಮ ರಾಜ್ಯದಲ್ಲಿ ನಂಬರ್ ಪ್ಲೇಟ್ ಅಳವಡಿಕೆ ತಡವಾಗಿದೆ. ಹೀಗಾಗಿ 3 ತಿಂಗಳು ಅವಧಿ ವಿಸ್ತರಣೆ ಮಾಡಿ ಆದಷ್ಟು ಬೇಗ ನಂಬರ್ ಪ್ಲೇಟ್ ಅಳವಡಿಕೆ ಮಾಡಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ವಿವರಿಸಿದರು.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...