No menu items!
15.1 C
Munich
Wednesday, May 6, 2026

ಮಧ್ಯಪ್ರದೇಶ ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ !

Must read

ಬೆಂಗಳೂರು: ಮಧ್ಯಪ್ರದೇಶದಲ್ಲಿ ಬಂಧಿಸಿರುವ ಕರ್ನಾಟಕದ ರೈತರನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ. ದೆಹಲಿಗೆ ಪ್ರತಿಭಟನೆಗೆ ತೆರಳುತ್ತಿದ್ದ ವೇಳೆ ಬಂಧಿಸಿ ವಾರಣಾಸಿಗೆ ಸ್ಥಳಾಂತರ ಮಾಡಲಾಗಿದೆ ಹಾಗಾಗಿ ಬಿಡುಗಡೆ ಮಾಡಿ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ. ಕೇಂದ್ರ ಸಚಿವ ಮೋಹನ್ ಯಾದವ್ ಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ ಅವರು, ರೈತರು ನ್ಯಾಯುತವಾಗಿ ಪ್ರತಿಭಟನೆಗೆ ತೆರಳುತ್ತಿದ್ದರು‌, ಅದು ಸಂವಿಧಾನಿಕ ಹಕ್ಕು. ರಾಜ್ಯದ ರೈತರನ್ನು ಭೋಪಾಲ್ ಪೊಲೀಸರು ಬಂಧಿಸಿರುವುದು ದುರದೃಷ್ಟಕರ.
ಮಧ್ಯಪ್ರದೇಶದ ಪೊಲೀಸರು ರೈತರ ಜೊತೆ ಕೆಟ್ಟದಾಗಿ ವರ್ತಿಸುತ್ತಿದ್ದಾರೆ. ನಮ್ಮ ರೈತರನ್ನು ವಶಕ್ಕೆ ಪಡೆದು ನಾಲ್ಕು ದಿವಸವಾಗಿದೆ. ಹೀಗಾಗಿ ಮಧ್ಯಪ್ರದೇಶದಲ್ಲಿ ಬಂಧಿಸಿರುವ ಕರ್ನಾಟಕದ ರೈತರನ್ನು ಕೂಡಲೇ ಬಿಡುಗಡೆಗೊಳಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರೊಂದಿಗೆ ದೂರವಾಣಿ ಮೂಲಕ ಇಂದು ಬೆಳಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು ರೈತರ ಯೋಗಕ್ಷೇಮ ವಿಚಾರಿಸಿದರು.

- Advertisement -spot_img

More articles

- Advertisement -spot_img

Latest article