ಬಿಜೆಪಿ ಕೈವಾಡದಿಂದ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತಗೊಂಡಿವೆ !

Date:

ಬೆಂಗಳೂರು: ಲೋಕ ಚುನಾವಣೆ ಹೊಸ್ತಿಲಲ್ಲೇ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. ಬಿಜೆಪಿ ಕೈವಾಡದಿಂದ ಆದಾಯ ತೆರಿಗೆ ಇಲಾಖೆ ಪಕ್ಷದ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿದೆ ಎಂದು ಗೃಹ ಸಚಿವ ಪರಮೇಶ್ವರ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷಕ್ಕೆ ಹೇಗಾದರೂ ಮಾಡಿ ತೊಂದರೆ ಕೊಡಬೇಕು ಅಂತ ನಿರ್ಧಾರ ಮಾಡಿದ ಹಾಗೆ ಇದೆ. ಸುಪ್ರೀಂ ಕೋರ್ಟ್ ಚುನಾವಣೆ ಬಾಂಡ್ ತೆಗೆದುಕೊಳ್ಳಬಾರದು ಅಂತ ಆದೇಶ ಮಾಡಿದೆ. ಇಲ್ಲಿವರೆಗೂ ತೆಗೆದುಕೊಂಡಿರೋ ಬಾಂಡ್‌ಗಳ ಬಗ್ಗೆ ಮಾಹಿತಿ ಕೊಡುವಂತೆ ಸುಪ್ರೀಂ ಕೋರ್ಟ್ ಕೇಳಿದೆ. ಈ ಹಿನ್ನೆಲೆಯಲ್ಲಿ ಅವರು ಸೀಜ್‌ ಮಾಡಿದ್ದಾರೆ ಅನ್ನಿಸುತ್ತೆ ಎಂದು ಕಿಡಿ ಕಾರಿದ್ದಾರೆ.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಖಾತೆಗಳನ್ನ ಸೀಜ್ ಮಾಡೋ ಅವಶ್ಯಕತೆ ಇರಲಿಲ್ಲ. ಅಕೌಂಟ್ ವಿವರ ಕೇಳಬಹುದಿತ್ತು. ಸೀಜ್ ಮಾಡೋ ಅವಶ್ಯಕತೆ ಇರಲಿಲ್ಲ ಎಂದಿದ್ದಾರೆ ಐಟಿಗೆ ಅರಿವಾದ ಮೇಲೆ ಅಕೌಂಟ್ ಓಪನ್ ಮಾಡಿದ್ದಾರೆ. ಇದೆಲ್ಲವನ್ನು ನೋಡಿದ್ರೆ ಉದ್ದೇಶ ಪೂರ್ವಕವಾಗಿ ಕೇಂದ್ರ ಮಾಡ್ತಿದೆ ಅಂತ ನಮಗೆ ಅನಿಸುತ್ತದೆ. ಈ ಸಂಧರ್ಭದಲ್ಲಿ ಮಾಡಿದಾಗ ಉದ್ದೇಶಪೂರ್ವಕವಾಗಿ ಚುನಾವಣೆಗೆ ತೊಂದರೆ ಮಾಡೋದಕ್ಕೆ‌ ಮಾಡ್ತಿದ್ದಾರೆ ಅಂತ ಅನ್ನಿಸುತ್ತೆ. ಬರೀ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಹೀಗೆ, ಆದರೆ‌ ಇದು ಉದ್ದೇಶಪೂರ್ವಕವಾಗಿ ಆಗಿದೆ ಅಂತ ಅನ್ನಿಸುತ್ತದೆ. ಇದರಲ್ಲಿ ರಾಜಕೀಯ ಇದೆ ಅಂತ ಅನ್ನಿಸುತ್ತೆ ಅಂತ ಕೇಂದ್ರದ ವಿರುದ್ದ ಪರಮೇಶ್ವರ್ ವಾಗ್ದಾಳಿ ನಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ಇಂದು ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ: ಸಂಜೆ ಪತ್ನಿ ಸಮಾಧಿ ಬಳಿ ಅಂತ್ಯಕ್ರಿಯೆ 

ಇಂದು ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನ: ಸಂಜೆ ಪತ್ನಿ ಸಮಾಧಿ ಬಳಿ...

ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಕಾಂಗ್ರೆಸ್​​​​​ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ...

ನಮ್ಮ ಹೋರಾಟಕ್ಕೆ ಗಾಬರಿಗೊಂಡು ದೆಹಲಿಗೆ ವಾಹನ ಪ್ರವೇಶ ತಡೆಯುತ್ತಿರುವ ಬಿಜೆಪಿ ಸರ್ಕಾರ: ಡಿ.ಕೆ. ಶಿವಕುಮಾರ್

ನಮ್ಮ ಹೋರಾಟಕ್ಕೆ ಗಾಬರಿಗೊಂಡು ದೆಹಲಿಗೆ ವಾಹನ ಪ್ರವೇಶ ತಡೆಯುತ್ತಿರುವ ಬಿಜೆಪಿ ಸರ್ಕಾರ:...

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ

ಹೊರಟ್ಟಿಯವರ ಸೇವೆ ಸದಾಕಾಲ ಮುಂದುವರೆಯಲಿ: ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ: ಹ್ಯಾಂಡಸಮ್ ಟೀಚರ್ ಅಂಡ್...