ರಾಜ್ಯ ಸರ್ಕಾರದ ನಡೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತೀವ್ರ ಖಂಡನೆ

Date:

ಬೆಂಗಳೂರು: ರಾಜ್ಯದ ತೆರಿಗೆದಾರರ ಹಣವನ್ನು ದುರುಪಯೋಗಪಡಿಸಿಕೊಂಡಿರುವುದು ಸಂಪೂರ್ಣವಾಗಿ ಅವಮಾನಕರ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಹೇಳಿಕೆ ನೀಡಿರುವ ಅವರು ರಾಹುಲ್ ಗಾಂಧಿಯವರ ವಯನಾಡು ಕ್ಷೇತ್ರದಲ್ಲಿ ಕಾಡಾನೆ ದಾಳಿಗೆ ಮೃತಪಟ್ಟ ವ್ಯಕ್ತಿಗೆ ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ 15 ಲಕ್ಷ ರೂ.ಗಳನ್ನು ಅಕ್ರಮವಾಗಿ ಮಂಜೂರು ಮಾಡಿರುವುದು ರಾಜ್ಯದ ಜನರಿಗೆ ಮಾಡಿದ ದ್ರೋಹವಲ್ಲವೇ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಕರ್ನಾಟಕದಾದ್ಯಂತ ಬರಗಾಲ ಮತ್ತು ನೂರಾರು ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವ ಈ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ, ಸ್ವಲ್ಪವೂ ನಾಚಿಕೆಯಿಲ್ಲದೆ ರಾಜ್ಯದ ತುರ್ತು ಅಗತ್ಯಗಳತ್ತ ಗಮನಹರಿಸುವ ಬದಲು ರಾಹುಲ್ ಗಾಂಧಿಯವರನ್ನು ಸಂತೋಷಪಡಿಸಲು ಆದ್ಯತೆ ನೀಡುತ್ತಿರುವುದು ಖೇದಕರ. ಕಾಂಗ್ರೆಸ್ ಹೈಕಮಾಂಡ್‌ ಮೆಚ್ಚಿಸಲು ಕರ್ನಾಟಕದ ತೆರಿಗೆದಾರರ ಹಣವನ್ನು ಅನೈತಿಕವಾಗಿ ಬಳಸಿಕೊಳ್ಳುತ್ತಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಚಿವರುಗಳು ಹೊಣೆಹೊರಬೇಕು ಎಂದು ವಿಜಯೇಂದ್ರ ಟೀಕಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...