No menu items!
10.4 C
Munich
Wednesday, April 15, 2026

ನನಗೆ ಟಿಕೆಟ್ ನೀಡಬೇಕೆಂದು ನಾನು ಲಾಬಿ ಮಾಡಿಲ್ಲ !

Must read

ಮಂಡ್ಯ: ನನಗೆ ಟಿಕೆಟ್ ನೀಡಬೇಕೆಂದು ನಾನು ಲಾಬಿ ಮಾಡಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ಸೇರ್ಪಡೆಗೆ ತಾಂತ್ರಿಕವಾಗಿ ಅಡ್ಡಿಯಾಗಿದೆ. ಆ ಕಾರಣಕ್ಕಾಗಿ ನಾನು ಬಾಹ್ಯ ಬೆಂಬಲ ನೀಡಿದ್ದು, ಇದು ಬಿಜೆಪಿ ರಾಷ್ಟ್ರೀಯ ನಾಯಕರೆ ನನಗೆ ಹೇಳಿದ್ದಾರೆ. ನಾನು ಮೋದಿ ಹಾಗೂ ಜೆ.ಪಿ‌.ನಡ್ಡಾ ಅವರನ್ನು ಭೇಟಿಯಾದಾಗಲೂ ಮಂಡ್ಯದಲ್ಲಿ ಪಕ್ಷ ಸಂಘಟನೆ ಬಗ್ಗೆ ಮಾತನಾಡಿದ್ದೇನೆ. ಬಿಜೆಪಿಯೇ ಮಂಡ್ಯ ಟಿಕೆಟ್ ಉಳಿಸಿಕೊಳ್ಳಬೇಕು ಎಂದು ಕೇಳಿದ್ದಾರೆ. ನನಗೆ ಟಿಕೆಟ್ ನೀಡಬೇಕೆಂದು ನಾನು ಲಾಬಿ ಮಾಡಿಲ್ಲ ಎಂದರು.
ಕಾಂಗ್ರೆಸ್‌ಗೆ ಯಾರು ಆಹ್ವಾನ ಕೊಟ್ಟರು ಹೇಳಲಿ ಎಂದು ಚಲುವರಾಯಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ 25 ವರ್ಷ ಅಂಬರೀಶ್ ಇದ್ದರು. ಪರಿಚಯಸ್ಥರು ಇರುವ ಪಕ್ಷ ಅದು ಯಾವುದಾದರೂ ಕಾರ್ಯಕ್ರಮಗಳಲ್ಲಿ ಸಿಕ್ಕಾಗ ಪಕ್ಷಕ್ಕೆ ಕರೆದಿದ್ದಾರೆ. ಆದರೆ ಅದನ್ನ ಅಧಿಕೃತ ಆಹ್ವಾನ ಎನ್ನಲು ಆಗಲ್ಲ. ಚಲುವರಾಯಸ್ವಾಮಿ ನನ್ನನ್ನು ವೈಯಕ್ತಿಕವಾಗಿ ಕೇಳಿದ್ರೆ ನಾನು ಹೇಳ್ತೀನಿ‌. ಆದರೆ ಕರೆದವರ ಹೆಸರು ಬಹಿರಂಗ ಮಾಡಿ ಮುಜುಗರ ಮಾಡಲ್ಲ ಎಂದರು.

- Advertisement -spot_img

More articles

- Advertisement -spot_img

Latest article