ಬೆಂಗಳೂರು: ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನ್ ಚಂದ್ರ ಅಂಜಾರಿಯಾ ಅವರು ಪ್ರಮಾಣವಚನ ಸ್ವೀಕರಿಸಿದರು. ನೂತನ ಸಿಜೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧನೆ ಮಾಡಿದರು.
ಸಿಎಂ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಹೆಚ್.ಕೆ. ಪಾಟೀಲ್, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಸೇರಿ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರು ಫೆ. 24 ರಂದು ನಿವೃತ್ತಿಯಾಗಲಿರುವ ಹಿನ್ನೆಲೆಯಲ್ಲಿ ಈ ಹಿಂದೆ ಸುಪ್ರೀಂಕೋರ್ಟ್ ಕೊಲಿಜಿಯಂ, ನಿಲಯ್ ವಿಪಿನ್ ಚಂದ್ರ ಅಂಜಾರಿಯಾ ಅವರ ಹೆಸರನ್ನು ಶಿಫಾರಸು ಮಾಡಿತ್ತು.
ಈ ಶಿಫಾರಸಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕಳೆದ ವಾರ ಅಂಕಿತ ಹಾಕಿದ್ದರು. ಅಂಜಾರಿಯಾ ಅವರು 2011ರಿಂದ ಗುಜರಾತ್ ಹೈಕೋರ್ಟ್ನಲ್ಲಿ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ. ಹೈಕೋರ್ಟ್ ನ್ಯಾಯಧೀಶರಾಗಿ ಬಡ್ತಿ ಪಡೆಯುವ ಮೊದಲು ಅವರು ಗುಜರಾತ್ ಹೈಕೋರ್ಟ್ನಲ್ಲಿ ಸಿವಿಲ್, ಸಾಂವಿಧಾನಿಕ, ಕಂಪನಿ ಕಾನೂನು, ಕಾರ್ಮಿಕ ಮತ್ತು ಸೇವಾ ವಿಷಯಗಳಲ್ಲಿ ವಕೀಲರಾಗಿದ್ದರು.
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅಂಜಾರಿಯ ಪ್ರಮಾಣ ವಚನ ಸ್ವೀಕಾರ
Date: