ಕೋಲಾರ: ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪದ ಹಿನ್ನಲೆ ಕೋಲಾರದಲ್ಲಿ ಪ್ರತಿಭಟನೆ ನಡೆಸಿದ್ರು. ಕೋಲಾರ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ವೃತ್ತದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಿದ್ರು. ಕಾಂಗ್ರೇಸ್ ಸರ್ಕಾರ ಹಾಗೂ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ವಿರುದ್ದ ಧಿಕ್ಕಾರಗಳನ್ನ ಕೂಗಿದ್ರು. ಇನ್ನು ಇದೇ ವೇಳೆ ನಾಸೀರ್ ಹುಸೇನ್ ಭಾವಚಿತ್ರವನ್ನ ಚಪ್ಪಲಿ ಕಾಲಿನಿಂದ ತುಳಿದು ಆಕ್ರೋಶ ವ್ಯಕ್ತಪಡಿಸಿದ್ರು.
ಅಲ್ಲದೆ ನಾಸೀರ್ ಹುಸೇನ್ ಭಾವಚಿತ್ರಕ್ಕೆ ಬೆಂಕಿ ಹಚ್ಚಲು ಮುಂದಾದ ವೇಳೆ, ಮಧ್ಯ ಪ್ರವೇಶಿಸಿದ ಪೊಲೀಸತು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಬೆಂಕಿ ಹಚ್ಚಬಾರದು ಎಂದು ಪೊಲೀಸರು ಸೂಚನೆ ನೀಡಿದ ವೇಳೆ ಪೊಲೀಸರ ವಿರುದ್ದ ಧಿಕ್ಕಾರಗಳನ್ನ ಕೂಗಿದ್ರು. ನಂತರ ಕಾಂಗ್ರೇಸ್ ಕಛೇರಿಗೆ ಮುತ್ತಿಗೆ ಹಾಕಲು ಹೊರಡುವ ವೇಳೆ ಪ್ರತಿಭಟನಾಕಾರರನ್ನ ಪೊಲೀಸರು ಬಂಧಿಸಿದ್ದಾರೆ. ಇನ್ನು ನಾಸೀರ್ ಹುಸೇನ್ ಅವರನ್ನ ರಾಜ್ಯಸಭಾ ಸ್ಥಾನದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿದ್ರು. ಇನ್ನೂ ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ರು.
ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪ: ಕೋಲಾರದಲ್ಲಿ ಪ್ರತಿಭಟನೆ
Date: