ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಆರೋಪದ ಹಿನ್ನೆಲೆಯಲ್ಲಿ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಬಿಜೆಪಿ ಶಾಸಕರು ರಾಜ ಭವನ ಚಲೋ ನಡೆಸಿದರು. ಇನ್ನು ಬಿಜೆಪಿ ನಾಯಕರು ರಾಜ್ಯಪಾಲರನ್ನು ಭೇಟಿ ಮಾಡಿ ಪಾಕಿಸ್ತಾನದ ಪರ ಘೋಷಣೆ ಪ್ರಕರಣವನ್ನು ಎನ್ ಐ ಎ ತನಿಖೆಗೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ವಿಧಾನಸೌಧದಲ್ಲಿ ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ ಘಟನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರ ಹೊಣೆ ಎಂದು ಉಲ್ಲೇಖ ಮಾಡಿದೆ. ಅಲ್ಲದೆ ರಾಜ್ಯಪಾಲರ ಭಾಷಣದ ಸಂದರ್ಭವನ್ನು ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ. ರಾಜ್ಯಪಾಲರ ಭಾಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ರೈತರು ಕಂಗಾಲಾಗಿದ್ದು, ಅವರಿಗೆ ಪರಿಹಾರ ಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಆರೋಪಿಸಿದೆ.
ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟ ಬಿಜೆಪಿ- ಜೆಡಿಎಸ್ ಶಾಸಕರು
Date: