ವಿಜಯಪುರ: ರಾಜ್ಯದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಿಲ್ಲಿಸಲಾಗದಿದ್ದರೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿ ಮನೆಗೆ ಹೋಗಬೇಕೆಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಸಿದ್ದರಾಮಯ್ಯ ಸಂಪುಟದ ಪ್ರಮುಖ ಸಚಿವರೊಬ್ಬರು ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರು ಮಾಡುವ ಮಾತಾಡಿದ್ದರು. ಆಗಲೇ ತಾನು ಆದು ಬ್ರ್ಯಾಂಡ್ ಬೆಂಗಳೂರು ಅಲ್ಲ ಬಾಂಬ್ ಬೆಂಗಳೂರು ಅಗಲಿದೆ ಎಂದಿದ್ದೆ, ಅದೀಗ ಸಾಬೀತಾಗುತ್ತಿದೆ ಎಂದು ಯತ್ನಾಳ್ ಹೇಳಿದರು. ಹಿಂದೆ ಕುಕ್ಕರ್ ಬ್ಲಾಸ್ಟ್ ಪ್ರಕರಣ ನಡೆದಾಗಲೂ ಸಿದ್ದರಾಮಯ್ಯ ಅದನ್ನು ಉಡಾಫೆ ಮಾಡಿದ್ದರು,
ನಂತರ ಅದು ಭಯೋತ್ಪಾದಕ ಚಟಿವಟಿಕೆಗಳ ಭಾಗ ಎಂದು ಪ್ರೂವ್ ಆಯಿತು ಎಂದ ಯತ್ನಾಳ್ ಈ ಸರ್ಕಾರಕ್ಕೆ ಜನರ ಪ್ರಾಣಗಳ ಬಗ್ಗೆ ಕಾಳಜಿಯೇ ಇದ್ದಂತಿಲ್ಲ, ಕೇವಲ ತನ್ನ ಗ್ಯಾರಂಟಿಗಳ ಬಗ್ಗೆ ಹೇಳಿಕೊಂಡು ಸಾಗಿದೆ; ಅದರ ಗ್ಯಾರಂಟಿಗಳ ಭರದಲ್ಲಿ ಜನರ ಜೀವಕ್ಕೆ ಗ್ಯಾರಂಟಿ ಇಲ್ಲದಂತಾಗಿದೆ ಎಂದರು. ಸಿದ್ದರಾಮಯ್ಯನವರಿಗೆ ಭಯೋತ್ಪಾದಕ ಕೃತ್ಯಗಳನ್ನು ನಿಲ್ಲಿಸುವುದು ಸಾಧ್ಯವಾಗುತ್ತಿಲ್ಲ ಅಂತಾದರೆ ರಾಜೀನಾಮೆ ಸಲ್ಲಿಸಿ ವಿಧಾನಸಭೆಯನ್ನು ವಿಸರ್ಜಿಸಬೇಕು ಎಂದು ಬಿಜೆಪಿ ಶಾಸಕ ಹೇಳಿದರು.
ಈ ಸರ್ಕಾರಕ್ಕೆ ಜನರ ಪ್ರಾಣಗಳ ಬಗ್ಗೆ ಕಾಳಜಿಯೇ ಇದ್ದಂತಿಲ್ಲ !
Date: