ಬೆಂಗಳೂರು ಸೇರಿದಂತೆ 7 ರಾಜ್ಯಗಳಲ್ಲಿ ಎನ್ಐಎ ದಾಳಿ..! ಯಾಕೆ ಗೊತ್ತಾ..?

Date:

ಬೆಂಗಳೂರು: ಬೆಂಗಳೂರು ಸೇರಿದಂತೆ ಏಳು ರಾಜ್ಯಗಳ ವಿವಿಧ ಪ್ರದೇಶಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಶೋಧಕಾರ್ಯ ನಡೆಸಿದೆ. ಎನ್ಐಎ ಅಧಿಕಾರಿಗಳು ಪರಪ್ಪನ ಅಗ್ರಹಾರದಲ್ಲಿ ಪರಿಶೀಲನೆ ನಡೆಸಿದ್ದಾರೆ. ಬೆಳಗಿನ ಜಾವ 6 ಗಂಟೆವರೆಗು ತನಿಖೆ ನಡೆಸಿದ್ದು, ನಜೀರ್ ಸೇರಿದಂತೆ ಅನೇಕರ ವಿಚಾರಣೆ ನಡೆಸಿದ್ದಾರೆ. ಕೇಂದ್ರ ಅಪರಾಧ ವಿಭಾಗ ಅಧಿಕಾರಿಗಳು 2022ರ ಜುಲೈನಲ್ಲಿ ರಾಜ್ಯ ರಾಜಧಾನಿಯ ತಿಲಕ ನಗರದ ತಿಲಕ ನಗರದ ಬಹು ಮಹಡಿ ಕಟ್ಟಡದ ಮೂರನೇ ಮಹಡಿಯಲ್ಲಿರುವ ಫ್ಲ್ಯಾಟ್‌ನಲ್ಲಿ ವಾಸವಾಗಿದ್ದ, ಲಷ್ಕರ್-ಎ-ತೊಯ್ಬಾ ಸಂಘಟನೆ ಜೊತೆ ನಂಟು ಹೊಂದಿದ್ದ ಅಖ್ತರ್‌ ಹುಸೇನ್‌ ಎಂಬ ಶಂಕಿತ ಉಗ್ರನನ್ನು ಬಂಧಿಸಿದ್ದರು.
ಜೈಲಿನಿಂದ ಹೊರಬಂದ ನಂತರ, ಜುನೈದ್ ನಜೀರ್ ಆದೇಶದಂತೆ ಭಯೋತ್ಪಾದಕ ಚಟುವಟಿಕೆಗಳನ್ನು ಆರಂಭಿಸಿದನು. ಅಲ್ಲದೆ ತನ್ನ ಸಹಚರರಿಗೆ ಕೆಲವರ ಮೂಲಕ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಪೂರೈಸಿದ್ದನು. ಜುನೈದ್ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಉಳಿದ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ನಜೀರ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸಿಸಿಬಿ ಪೊಲೀಸರು ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಿದ್ದಾರೆ. ಸದ್ಯ ಎನ್ಐಎ ಈ ಪ್ರಕರಣದ ತನಿಖೆ ನಡೆಸುತ್ತಿದೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...