ನವದೆಹಲಿ: ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಹೌದು ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆದ್ದರಿಂದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 100 ರೂ. ಕಡಿತಗೊಳಿಸಿ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮಹಿಳಾ ದಿನಾಚರಣೆಯಂದು ದರವನ್ನು ಕಡಿಮೆ ಮಾಡಿದ್ದೇವೆ ಎಂದು ಬರೆದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ತಿಳಿಸಿದ್ದಾರೆ.
ಮೋದಿ ಪೋಸ್ಟ್‌ನಲ್ಲಿ ಏನಿದೆ?
ಇಂದು ಮಹಿಳಾ ದಿನ. ನಮ್ಮ ಸರ್ಕಾರವು ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 100 ರೂ. ಇಳಿಕೆ ಮಾಡಿದೆ. ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ, ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡಲಿದೆ.
ಅಡುಗೆ ಅನಿಲವನ್ನು ಹೆಚ್ಚು ಕೈಗೆಟುಕುವಂತೆ ಮಾಡುವ ಮೂಲಕ ನಾವು ಕುಟುಂಬಗಳ ಯೋಗಕ್ಷೇಮ ಮತ್ತು ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದ್ದೇವೆ. ಮಹಿಳೆಯರ ಸಬಲೀಕರಣ ಹಾಗೂ ಹೆಣ್ಣುಮಕ್ಕಳು ಸುಲಭವಾಗಿ ಜೀವನ ಸಾಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಪ್ರಯತ್ನವಾಗಿದೆ ಎಂದು ಬರೆದಿದ್ದಾರೆ.
ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್: ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ
Date: