ಮೈಸೂರು: ತೀವ್ರ ಅನಾರೋಗ್ಯದಿಂದ ಮಾಜಿ ಕಾಂಗ್ರೆಸ್ ಶಾಸಕ ವಾಸು ನಿಧನರಾಗಿದ್ದಾರೆ. ಮಾಜಿ ಶಾಸಕ ವಾಸು ಅವರು ಕೆಲ ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇವರು ಮೇಯರ್ ವಾಸು ಎಂದೇ ಖ್ಯಾತರಾಗಿದ್ದರು. ಅಲ್ಲದೇ ಚಾಮರಾಜನಗರ ಕ್ಷೇತ್ರದ ಶಾಸಕರಾಗಿ ಕೆಲಸ ಮಾಡಿದ್ದರು.
ವಿದ್ಯಾವಿಕಾಸ ಎಂಜಿನಿಯರಿಂಗ್ ಕಾಲೇಜು ನಡೆಸುತ್ತಿದ್ದ ಇವರು ಸ್ಥಳೀಯ ಪ್ರಜಾನುಡಿ ಪತ್ರಿಕೆಯನ್ನೂ ನಡೆಸುತ್ತಿದ್ದರು. ಕಳೆದ ವಿಧನಸಭಾ ಚುನಾವಣೆಯಲ್ಲಿ ವಾಸು ಅವರು ಚಾಮರಾಜನಗರ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಬಯಸಿದ್ದರು. ಆದರೆ ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ.
ತೀವ್ರ ಅನಾರೋಗ್ಯದಿಂದ ಮಾಜಿ ಕಾಂಗ್ರೆಸ್ ಶಾಸಕ ವಾಸು ನಿಧನ
Date:






