ಬೆಂಗಳೂರು: ಉಪಕಾರ ಮಾಡಿದರೆ ಈಗ ನನ್ನ ಮೇಲೆಯೇ ಹೀಗೆ ಆರೋಪ ಮಾಡಿದ್ದಾರೆ ಎಂದು ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರು ನಗರದಲ್ಲಿ ಲೈಂಗಿಕ ದೌರ್ಜನ್ಯ ಆರೋಪದ ವಿಚಾರವಾಗಿ ದಾಖಲಾಗಿರುವ ಎಫ್ಐಆರ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನ್ಯಾಯ ಕೊಡಿಸಿ ಎಂದು ಬಂದಿದ್ದ ಅಮ್ಮ, ಮಗಳು ಹಲವು ಸಲ ನನ್ನ ಬಳಿ ಬಂದಿದ್ದರು ಎಂದಿದ್ದಾರೆ. ತಾಯಿ-ಮಗಳು ಅನೇಕ ಸಲ ಇಲ್ಲಿಗೆ ಬಂದು ಹೋಗಿದ್ದರು.
ಅನ್ಯಾಯ ಆಗಿದೆ ಎಂದು ನನ್ನ ಬಳಿ ಬಂದಿದ್ದರು. ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದರು. ಅದಾದ ಮೇಲೆ ನನ್ನ ವಿರುದ್ಧ ಏನೇನೋ ಮಾತನಾಡಿದರು. ಬಳಿಕ ಅವರನ್ನ ಕಮಿಷನರ್ ಬಳಿ ಕಳಿಸಿಕೊಟ್ಟೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಉಪಕಾರ ಮಾಡಿದರೆ ಈಗ ನನ್ನ ಮೇಲೆಯೇ ಹೀಗೆ ಆರೋಪ ಮಾಡಿದ್ದಾರೆ. ಯಾರೋ ಒಬ್ಬ ಹೆಣ್ಣು ಮಗಳು ದೂರು ಕೊಟ್ಟಿದ್ದಾರೆ. ಇರಲಿ ಎದುರಿಸೋಣ. ನಾನು ಈ ಕುರಿತು ಹೆಚ್ಚು ಮಾತನಾಡಲು ಇಷ್ಟಪಡುವುದಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.
ತಮ್ಮ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ವಿಚಾರಕ್ಕೆ ಯಡಿಯೂರಪ್ಪ ಹೇಳಿದ್ದೇನು.?
Date: