ಸಿಲಿಕಾನ್ ಸಿಟಿಯಲ್ಲಿ ಅಲರ್ಟ್ !

Date:

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಸಿಲಿಕಾನ್ ಸಿಟಿಯಲ್ಲಿ ಅಲರ್ಟ್ ಆಗಿದೆ. ಹೌದು ಲೋಕಸಭಾ ಚುನಾವಣೆ ಹಿನ್ನೆಲೆ ನಗರದಲ್ಲಿ ಅಲರ್ಟ್ ಆಗಿದ್ದು, ಮಾದರಿ ನೀತಿಸಂಹಿತೆ ಜಾರಿಗೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ. ಅಧಿಕಾರಿಗಳ ಜೊತೆ ಸಭೆ ನಡೆಸಿ ಸೂಚನೆ ನೀಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ, ತೆಗೆಯಲು ತಿಳಿಸಿದ್ದು,
ಮಾದರಿ ನೀತಿ ಸಂಹಿತೆ ಉಲ್ಲಘನೆಗಳ ಮೇಲೆ ನಿಗಾವಹಿಸಲು ಸೂಚಿಸಿದ್ದಾರೆ. ಸರ್ಕಾರಿ ಕಛೇರಿ, ಸರ್ಕಾರಿ ಆಸ್ತಿಗಳು ಸೇರಿದಂತೆ ಇನ್ನಿತರೆ ಸಾರ್ವಜನಿಕ ಸ್ಥಳಗಳಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ ಹಾಗೂ ಜಾಹೀರಾತುಗಳನ್ನ ತೆಗೆಯಲು ಅಧಿಕಾರಿಗಳಿಗೆ ಆದೇಶಿಸಲಾಗಿದೆ. ಯಾವುದೇ ಫ್ಲೆಕ್ಸ್, ಪೋಸ್ಟರ್, ಬ್ಯಾನರ್, ಬಿತ್ತಿಪತ್ರಗಳು, ಗೋಡೆ ಬರಹಗಳು ಇರುವಂತಿಲ್ಲ. ಕುಡಿಯುವ ನೀರಿನ ಘಟಕ, ಉದ್ಯಾನವನ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಅಳವಡಿಸಿರುವ ನಾಮಫಲಕಗಳಲ್ಲಿ ಜನಪ್ರತಿನಿಧಿಗಳ ಹೆಸರು,


ಭಾವಚಿತ್ರಗಳು ಇರುವಂತಿಲ್ಲ.24 ಗಂಟೆಗಳ ಒಳಗೆ ಸರ್ಕಾರದ ವೆಬ್ ಸೈಟ್ಗಳಲ್ಲಿ ರಾಜಕೀಯ ಪ್ರತಿನಿಧಿಗಳ ಭಾವಚಿತ್ರ ತೆಗೆಯಲು, RO, ARO ಕಚೇರಿಗಳಲ್ಲಿ ನಿಯಂತ್ರಣ ಕೊಠಡಿ ಸ್ಥಾಪನೆಗೆ, ಎಫ್‌ಎಸ್‌ಟಿ, ಎಸ್‌ಎಸ್‌ಟಿ ಸೇರಿದಂತೆ ಇನ್ನಿತರೆ ತಂಡಗಳನ್ನ ಸಕ್ರಿಯಗೊಳಿಸುವಂತೆ ಅಧಿಕಾರಿಗಳ ಆಂತರಿಕ ಸಭೆಯಲ್ಲಿ ಸೂಚನೆ ನೀಡಲಾಗಿದೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...