No menu items!
17.7 C
Munich
Friday, May 1, 2026

ಈಶ್ವರಪ್ಪ ಪುತ್ರ ಕಾಂತೇಶ್ ಗೆ ಟಿಕೆಟ್ ತಪ್ಪಲು ನಾನು ಕಾರಣ ಅಲ್ಲ !

Must read

ಶಿವಮೊಗ್ಗ: ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್ಗೆ ಟಿಕೆಟ್ ತಪ್ಪಲು ನಾನು ಕಾರಣ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷಕ್ಕೆ ಜನ ಆಶೀರ್ವಾದ ಮಾಡುತ್ತಾರೆಂದು ವಿಶ್ವಾಸವಿದೆ. ನನ್ನ ಅವಶ್ಯಕತೆ ಎಲ್ಲಿದೆ ಆ ಕ್ಷೇತ್ರಕ್ಕೆ ಹೋಗಿ ಪ್ರಚಾರ ಮಾಡುತ್ತೇನೆ ಎಂದರು. ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್ಗೆ ಟಿಕೆಟ್ ತಪ್ಪಲು ನಾನು ಕಾರಣ ಅಲ್ಲ. ಬಿಜೆಪಿಯ ಕೇಂದ್ರ ಚುನಾವಣೆ ಸಮಿತಿ ಟಿಕೆಟ್ ನಿರ್ಧಾರ ಮಾಡಿದೆ.
ಈಶ್ವರಪ್ಪ ಪಕ್ಷ ಕಟ್ಟಿ ಬೆಳೆಸಿದವರು, ಮನಸ್ಸಿಗೆ ನೋವಾಗಿರಬಹುದು. ರಾಜ್ಯ ನಾಯಕರು ಈಶ್ವರಪ್ಪ ಜತೆ ಮಾತಾಡುವ ಪ್ರಯತ್ನ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ಎಲ್ಲರೂ ಬರುತ್ತಾರೆ. ಕಾರ್ಯಕ್ರಮಕ್ಕೆ ಬಂದು ಕೆ.ಎಸ್.ಈಶ್ವರಪ್ಪ ಮಾತನಾಡುವ ವಿಶ್ವಾಸ ಇದೆ. ಅವರನ್ನು ಮತ್ತೆ ಕರೆತರುವ ಪ್ರಯತ್ನ ಪಕ್ಷದ ಹಿರಿಯರು ಮಾಡುತ್ತಿದ್ದಾರೆ. ತಮ್ಮ ಮನಸ್ಸಿಗೆ ಆದ ನೋವಿನಿಂದ ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಅಂದಿದ್ದಾರೆ. ಟಿಕೆಟ್ ವಿಚಾರದಲ್ಲಿ ನಮ್ಮ ಪಾತ್ರ ಏನೂ ಇಲ್ಲ ಎಂದು ಸ್ಪಷ್ಟನೆ ನೀಡಿದರು.

- Advertisement -spot_img

More articles

- Advertisement -spot_img

Latest article