No menu items!
9.2 C
Munich
Friday, May 1, 2026

ಮಂಡ್ಯದಿಂದ ಹೆಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸುವುದು ಬಹುತೇಕ ಫಿಕ್ಸ್‌

Must read

ಮಂಡ್ಯ: ಮಂಡ್ಯದಿಂದ ಮೈತ್ರಿ ಅಭ್ಯರ್ಥಿಯಾಗಿ ಹೆಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸುವುದು ಬಹುತೇಕ ಫಿಕ್ಸ್‌ ಆಗಿದೆ. ಹೌದು ಲೋಕಸಭೆ ಚುನಾವಣೆ ಸಂಬಂಧ ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲೂ ಕುಮಾರಸ್ವಾಮಿ ಸ್ಪರ್ಧೆಯ ಬಗ್ಗೆ ಚರ್ಚೆ ನಡೆಯಿತು. ಸಭೆಯಲ್ಲಿ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧೆ ಮಾಡಲು ಎಲ್ಲಾ ನಾಯಕರು ಒಪ್ಪಿಗೆ ನೀಡಿದ್ದಾರೆ. ಬಿಜೆಪಿ ಹೈಕಮಾಂಡ್‌ನಿಂದಲೂ ಕುಮಾರಸ್ವಾಮಿ ಸ್ಪರ್ಧೆಗೆ ಸಮ್ಮತಿ ಸಿಕ್ಕಿದೆ.
ಹೀಗಾಗಿ ಮಾರ್ಚ್‌ 25ಕ್ಕೆ ಕುಮಾರಸ್ವಾಮಿ ಅಧಿಕೃತ ಅಭ್ಯರ್ಥಿ ಎಂದು ಘೋಷಣೆಯಾಗುವ ಸಾಧ್ಯತೆಯಿದೆ. ಇಂದು ಕುಮಾರಸ್ವಾಮಿ ಚೆನ್ನೈಗೆ ತೆರಳಲಿದ್ದು ಮಾರ್ಚ್‌ 21 ರಂದು ಆಪರೇಷನ್‌ ನಡೆಯಲಿದೆ. ಆಪರೇಷನ್‌ ಮುಗಿಸಿದ ಬಳಿಕ ಮಂಡ್ಯದಲ್ಲಿ ಬೃಹತ್ ಸಭೆ ಆಯೋಜನೆಯಾಗಲಿದೆ. ಈ ಸಭೆಯ ಮೂಲಕ ಅಧಿಕೃತ ಚುನಾವಣಾ ಅಖಾಡಕ್ಕೆ ಹೆಚ್‌ಡಿಕೆ ಧುಮುಕಲಿದ್ದಾರೆ.

- Advertisement -spot_img

More articles

- Advertisement -spot_img

Latest article