ಹೊಯ್ಸಳ ಪೊಲೀಸ್ ಸಿಬ್ಬಂದಿಗೆ ಬಂದೂಕು ಕಡ್ಡಾಯಗೊಳಿಸಿ ಆದೇಶ

Date:

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಹೊಯ್ಸಳ ಪೊಲೀಸ್ ಸಿಬ್ಬಂದಿಗೆ ಬಂದೂಕು ಕಡ್ಡಾಯಗೊಳಿಸಿ ಆದೇಶ ನೀಡಲಾಗಿದೆ. ಹೌದು ಹೊಯ್ಸಳ ತಂಡದ ಎಎಸ್ಐ ಬಳಿ ಗನ್ ಕಡ್ಡಾಯವಾಗಿ ಇರಬೇಕು ಎಂದು ಸೂಚನೆ ನೀಡಲಾಗಿದೆ. ಸಾಮಾನ್ಯವಾಗಿ ಯಾವುದೇ ಅಪರಾಧ ಕೃತ್ಯ ಅಥವಾ ಇತರ ಘಟನೆಗಳು ಸಂಭವಿಸಿದಾಗ ಮೊದಲು ಸ್ಥಳಕ್ಕೆ ತಲುಪುವುದು ಹೊಯ್ಸಳ ಸಿಬ್ಬಂದಿ. ಕೃತ್ಯ ನಡೆಯುವ ಸ್ಥಳದಲ್ಲಿ ಆರೋಪಿಗಳ ಕೈಯಲ್ಲಿ ಮಾರಕಸ್ತ್ರಗಳು ಅಥವಾ ಇತರ ಆಯುಧಗಳಿದ್ದರೆ ಅವರನ್ನು ಎದುರಿಸುವುದು ಅಷ್ಟು ಸುಲಭವಲ್ಲ. ಈ ಕಾರಣಕ್ಕೆ ಬಂದೂಕು ಕಡ್ಡಾಯಗೊಳಿಸಲಾಗಿದೆ.
ಘಟನಾ ಸ್ಥಳದಲ್ಲಿರುವ ಆರೋಪಿಗಳ ಬಳಿ ಮಾರಕಾಸ್ತ್ರಗಳಿದ್ದಲ್ಲಿ ಅವರು ಪೊಲೀಸರ ಮೇಲೆ ಕೂಡ ದಾಳಿ ನಡೆಸುವ ಸಾಧ್ಯತೆ ಇರುತ್ತದೆ. ಇಂತಹ ಸಂದರ್ಭಗಳಲ್ಲಿ ಅವರನ್ನು ಬಂಧಿಸುವುದು ಪೊಲೀಸರಿಗೆ ಸಾಧ್ಯವಾಗದೆ ಹೋಗಬಹುದು. ಆರೋಪಿಗಳನ್ನು ವಶಕ್ಕೆ ಪಡೆಯಲು ಪೊಲೀಸರ ಬಳಿ ಆಯುಧಯ ಇರಲೇಬೇಕಾಗುತ್ತದೆ. ಈ ಕಾರಣಕ್ಕೆ ಗನ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸುವೆ.

Share post:

Subscribe

spot_imgspot_img

Popular

More like this
Related

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ವೈದ್ಯಕೀಯ ಜಾಮೀನು

ಅಕ್ರಮ ಹಣ ವರ್ಗಾವಣೆ ಪ್ರಕರಣ; ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ...

ಬೆಂಗಳೂರು–ಮೈಸೂರು ರೈಲು ಮಾರ್ಗದ ಬೇಡಿಕೆಗಳ ಬಗ್ಗೆ ರೈಲ್ವೆ ಸಚಿವರೊಂದಿಗೆ ಕುಮಾರಸ್ವಾಮಿ ಚರ್ಚೆ

ಬೆಂಗಳೂರು–ಮೈಸೂರು ರೈಲು ಮಾರ್ಗದ ಬೇಡಿಕೆಗಳ ಬಗ್ಗೆ ರೈಲ್ವೆ ಸಚಿವರೊಂದಿಗೆ ಕುಮಾರಸ್ವಾಮಿ ಚರ್ಚೆ ನವದೆಹಲಿ:...

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ...

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು ಸಾವು

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು...