ಕೋಲಾರ, ಮಂಡ್ಯ ಹಾಗೂ ಹಾಸನ ಕ್ಷೇತ್ರದಲ್ಲಿ ಜೆಡಿಎಸ್‌ ಸ್ಪರ್ಧೆ.!

Date:

ಬೆಂಗಳೂರು : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ಏಪ್ರಿಲ್‌ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಲಿದೆ. ಈಗಾಗಲೇ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಬಹುತೇಕ ಕ್ಷೇತ್ರಗಳಿಗೆ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿವೆ. ಇದರ ಬೆನ್ನಲ್ಲೇ ಬೆಂಗಳೂರಿನ ಅರಮನೆ ಮೈದಾನದ ವೃಕ್ಷ ಸಭಾಂಗಣದಲ್ಲಿ ರಾಜ್ಯ ಚುನಾವಣೆ ನಿರ್ವಹಣಾ ಸಮಿತಿಯ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ಹಾಸನ, ಮಂಡ್ಯ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದ್ದೇವೆ ಎಂದು ಬಿಜೆಪಿಯ ಚುನಾವಣಾ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲಾ ಅವರು ಹೇಳಿದ್ದಾರೆ.
ಕೋಲಾರ, ಮಂಡ್ಯ, ಹಾಸನ ಕ್ಷೇತ್ರಗಳಲ್ಲಿ ಅಭ್ಯರ್ಥಿ ಯಾರೆಂಬುದು ಮುಖ್ಯವಲ್ಲ. ಕಾರ್ಯಕರ್ತರೆಲ್ಲ ಒಟ್ಟಾಗಿ ಪೂರ್ತಿ ಶ್ರದ್ಧೆಯನ್ನಿಟ್ಟು ಮನಪೂರ್ವಕವಾಗಿ ಕೆಲಸ ಮಾಡಬೇಕು. 25 ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಜೆಡಿಎಸ್ ಎಲ್ಲಿಯು ಕೂಡ ಹಸ್ತಕ್ಷೇಪ ಮಾಡಿಲ್ಲ. ಹೀಗಾಗಿ ಅವರು ಕೇಳಿದ 3 ಕ್ಷೇತ್ರಗಳನ್ನು ಬಿಟ್ಟು ಕೊಟ್ಟಿದ್ದೇವೆ ಎಂದು ರಾಧಾ ಮೋಹನ್ ದಾಸ್ ಅವರು ಕಾರ್ಯಾಗಾರದಲ್ಲಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ ಇಳಿಕೆ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್ : ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ...

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು ಸಾವು

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು...

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...