ಕೊಪ್ಪಳ: , ‘ಮೋದಿ ಮೋದಿ’ ಎಂಬ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು ಎಂದು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಮೋದಿ ಮೋದಿ’ ಎಂಬ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು ಎಂದಿದ್ದಾರೆ. ಮೋದಿ ಸರ್ಕಾರ ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೇಳಿತ್ತು.
ಆದರೆ, ಉದ್ಯೋಗ ಕೊಡಿ ಎಂದರೆ ಪಕೋಡ ಮಾರಿ ಎನ್ನುತ್ತಾರೆ ಮೋದಿ. ಹತ್ತು ವರ್ಷದಲ್ಲಿ ಇಪ್ಪತ್ತು ಕೋಟಿ ಯುವಕರಿಗೆ ಉದ್ಯೋಗ ಸಿಗಬೇಕಿತ್ತು. ಆದರೆ ಮೋದಿ ಸರ್ಕಾರ ಭರವಸೆ ಈಡೇರಿಸಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀಡಿದ ಭರವಸೆಯಂತೆ ಉದ್ಯೋಗ ಸೃಷ್ಟಿ ಮಾಡದ ಕಾರಣ ಇನ್ನು ವಿದ್ಯಾರ್ಥಿಗಳು ಮತ್ತು ಯುವಕರು ‘ಮೋದಿ ಮೋದಿ’ ಎಂದರೆ ಅವರ ಕಪಾಳಕ್ಕೆ ಹೊಡೆಬೇಕು ಎಂದು ಸಚಿವರು ಹೇಳಿದ್ದಾರೆ.
‘ಮೋದಿ ಮೋದಿ’ ಎಂದರೆ ಅವರ ಕಪಾಳಕ್ಕೆ ಹೊಡೆಬೇಕು: ಶಿವರಾಜ ತಂಗಡಗಿ
Date: