No menu items!
20.5 C
Munich
Saturday, June 13, 2026

ಸೋಲಿನ ಭೀತಿಯಿಂದ ಸಚಿವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ: ಬಿವೈ ವಿಜಯೇಂದ್ರ

Must read

ಮೈಸೂರು: ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಶಾಪ ಎನ್ನುವ ರೀತಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಪ್ರವಾಸದಲ್ಲಿರುವ ಅವರು, ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. 18 ಮಂದಿ ಸಚಿವರನ್ನು ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಸಲು ಸಿಎಂ ಹಾಗೂ ಡಿಸಿಎಂ ಮುಂದಾಗಿದ್ದರು.
ಆದರೆ, ಸೋಲಿನ ಭೀತಿಯಿಂದ ಸಚಿವರು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಶಾಪ ಎನ್ನುವ ರೀತಿಯಾಗಿದೆ. ಕಡಿಮೆ ಅವಧಿಯಲ್ಲಿ ‘ಕೈ’ ಸರ್ಕಾರ ಜನಪ್ರಿಯತೆ ಕಳೆದುಕೊಂಡಿದೆ. ಯಾರ ಪರವಾಗಿಯೂ ಈ ಸರ್ಕಾರವಿಲ್ಲ ಎಂದು ಜನ ಬೇಸತ್ತಿದ್ದಾರೆ. ಜನಪ್ರಿತೆ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷವೀಗ ನಮ್ಮ ಮುಖಂಡರನ್ನು ಸೆಳೆಯುವ ಕೆಲಸ ಮಾಡುತ್ತಿದೆ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದರು.

- Advertisement -spot_img

More articles

- Advertisement -spot_img

Latest article