ಮಂಡ್ಯ: ಇಂದು ಮಂಡ್ಯ ಮೈತ್ರಿ ಅಭ್ಯರ್ಥಿ ಹೆಚ್‌ಡಿ ಕುಮಾರಸ್ವಾಮಿ ಸುಮಲತಾ ಅವರನ್ನು ಭೇಟಿಯಾಗಲಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸುಮಲತಾ ಅವರು ಪಕ್ಷೇತರ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರು. ಈ ವೇಳೆ ಕುಮಾರಸ್ವಾಮಿ ಹಾಗೂ ಸುಮಲತಾ ಅವರ ನಡುವೆ ಮಾತಿನ ಸಮರ ನಡೆದಿತ್ತು. ಇದೀಗ ಬದಲಾದ ರಾಜಕೀಯದಲ್ಲಿ ಸುಮಲತಾ ಅವರು ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಬೆಂಬಲಿಸುವಂತೆ ಇಂದು ಕುಮಾರಸ್ವಾಮಿ ಅವರು ಸುಮಲತಾ ಅವರ ಬೆಂಗಳೂರು ನಿವಾಸಕ್ಕೆ ಮಧ್ಯಾಹ್ನ 3 ಗಂಟೆಗೆ ಭೇಟಿ ನೀಡಿ ಮಾತುಕತೆ ನಡೆಸಲಿದ್ದಾರೆ.
ಇಂದು ಸುಮಲತಾ ಭೇಟಿ ಮಾಡಲಿರುವ ಹೆಚ್‌ಡಿಕೆ
Date: