No menu items!
13.7 C
Munich
Wednesday, May 20, 2026

ಜೆಡಿಎಸ್ ಮಾಜಿ ಶಾಸಕ ಕೆ ಪಿ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ

Must read

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಪಕ್ಷದಲ್ಲಿ ಭಾರಿ ಭಿನ್ನಮತ ಸ್ಪೋಟವಾಗಿದ್ದು, ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಪರಮಾಪ್ತ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಪಿ ಬಚ್ಚೇಗೌಡ ಹಾಗೂ ಬೆಂಬಲಿಗರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆಯಲ್ಲಿ ಸಾಕೇತಿಕವಾಗಿ ಕಾಂಗ್ರೆಸ್ ಸೇರ್ಪಡೆ ಆದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಕೆ ಸುಧಾಕರ್ಗೆ ಟಿಕೆಟ್ ನೀಡಿದ ಹಿನ್ನಲೆ ಇದಕ್ಕೆ ವಿರೋಧಿಸಿ ಕಾಂಗ್ರೆಸ್ಗೆ ಸೇರಿದ್ದಾರೆ. ಇವರ ಜೊತೆಗೆ ಜೆಡಿಎಸ್ ಜಿಲ್ಲಾಧ್ಯಕ್ಷ ಮುನೇಗೌಡ ಸೇರಿದಂತೆ 50ಕ್ಕೂ ಹೆಚ್ಚು ಜನ ಮುಖಂಡರು ಕಾಂಗ್ರೆಸ್ ಸೇರಿದರು. ಇನ್ನು ಏಪ್ರಿಲ್ 2ರಂದು ಅಧಿಕೃತವಾಗಿ ಕೆ.ಪಿ.ಸಿ.ಸಿ ಕಚೇರಿಯಲ್ಲಿ ಸೇರ್ಪಡೆಯಾಗಲಿದ್ದಾರೆ.

- Advertisement -spot_img

More articles

- Advertisement -spot_img

Latest article