ಮಂಡ್ಯ: ತೀವ್ರ ಕುತೂಹಲ ಮೂಡಿಸಿದ್ದ ಸಂಸದೆ ಸುಮಲತಾ ಅಂಬರೀಶ್ ಅವರ ರಾಜಕೀಯ ನಡೆ ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಸಂಸದೆ ಸುಮಲತಾ ಅಂಬರೀಶ್ ಬೆಂಬಲ ಘೋಷಿಸಿದ್ದಾರೆ. ಹೌದು ಮಂಡ್ಯದಲ್ಲಿ ಬುಧವಾರ ಬೆಂಬಲಿಗರ ಸಭೆ ನಡೆಸಿ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿಗೆ ನಾನು ಬೆಂಬಲ ನೀಡುತ್ತೇನೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಸ್ಪಷ್ಟಪಡಿಸಿದರು.
ಎಂಪಿ, ಎಂಎಲ್‌ಎಗೆ ಟಿಕೆಟ್ ಸಿಗದಿದ್ದರೆ ಅನೇಕರು ಪಕ್ಷ ಬಿಟ್ಟು ಹೋಗುತ್ತಾರೆ. ಎಂಪಿ ಸೀಟ್ ಬಿಟ್ಟುಕೊಟ್ಟು ಬಿಜೆಪಿ ಸೇರುವ ನಿರ್ಧಾರ ಮಾಡಿದ್ದೇನೆ. ಮೋದಿ ಅವರ ಕಾರ್ಯಕ್ಷಮತೆ ಮೆಚ್ಚಿ ನಾನು ಬಿಜೆಪಿ ಸೇರ್ಪಡೆಯಾಗುತ್ತೇನೆ ಎಂದು ತಿಳಿಸಿದರು. ಮಂಡ್ಯ ಮಣ್ಣನ್ನು ಸುಮಲತಾ ಅಂಬರೀಶ್ ಎಂದೆಂದಿಗೂ ಬಿಡಲ್ಲ ಎಂದು ಭಾವನಾತ್ಮಕವಾಗಿ ಸುಮಲತಾ ಪ್ರಮಾಣ ಮಾಡಿದರು.
ಮೈತ್ರಿ ಅಭ್ಯರ್ಥಿಗೆ ಸುಮಲತಾ ಬೆಂಬಲ! ಮಂಡ್ಯ ಮಣ್ಣನ್ನು ಎಂದೆಂದಿಗೂ ಬಿಡಲ್ಲ ಎಂದ ಸಂಸದೆ
Date: