ಬೆಂಗಳೂರು: ವ್ಯಕ್ತಿಯೋರ್ವ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಬೆಂಗಳೂರಿನ ಹೈಕೋರ್ಟ್ʼನ ಹಾಲ್ 1ರಲ್ಲಿ ನಡೆದಿದೆ. ಮೈಸೂರು ಮೂಲದ ಶ್ರೀನಿವಾಸ್ (51) ಚಿನ್ನಮ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದು, ಶ್ರೀನಿವಾಸ್ ಅವರಿಗೆ ಸಂಬಂಧಿಸಿದ ಪ್ರಕರಣದೊಂದು ಹೈಕೋರ್ಟ್ ಮೆಟ್ಟಿಲೇರಿದೆ. ಇಂದು ಪ್ರಕರಣ ವಿಚಾರಣೆ ನಡೆಯುತ್ತಿತ್ತು.
ಪ್ರಕರಣದ ವಿಚಾರಣೆ ಅಂತ್ಯಕ್ಕೆ ತಲುಪಿದ್ದಂತೆ ನ್ಯಾಯಮೂರ್ತಿಗಳ ಎದುರು ಬಂದ ಶ್ರೀನಿವಾಸ್ ಅರ್ಜಿಯೊಂದನ್ನು ನ್ಯಾಯಾಲಯದ ಸಿಬ್ಬಂದಿಗೆ ನೀಡಿ, ಚಾಕುವಿನಂತಹ ಸಣ್ಣ ವಸ್ತುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸ್ಥಳದಲ್ಲಿದ್ದ ಪೊಲೀಸರು ತಕ್ಷಣ ಶ್ರೀನಿವಾಸ್ ಅವರನ್ನು ರಕ್ಷಿಸಿ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇನ್ನು ಹೈಕೊರ್ಟ್ಗೆ ಕೇಂದ್ರ ವಿಭಾಗದ ಡಿಸಿಪಿ, ಕಬ್ಬನ್ ಪಾರ್ಕ್ ಇನ್ಸ್ಪೆಕ್ಟರ್ ಭೇಟಿ ನೀಡಿದ್ದಾರೆ. ವ್ಯಕ್ತಿಯ ಪೂರ್ವಾಪರ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮುಂದೆಯೇ ಆತ್ಮಹತ್ಯೆಗೆ ಯತ್ನ..!
Date: