ಮಂಡ್ಯ: ಲೋಕಸಭಾ ಕ್ಷೇತ್ರದ ಚುನಾವಣೆಗೆ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸೋದಿಲ್ಲ. ಶೀಘ್ರ ಬಿಜೆಪಿ ಪಕ್ಷ ಸೇರ್ಪಡೆಯಾಗಲಿದ್ದು, ಪಕ್ಷದ ನಿಲುವಿಗೆ ಬದ್ಧ ಎನ್ನುವ ಮೂಲಕ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಬೆಂಬಲ ನೀಡುವುದಾಗಿ ಸಂಸದೆ ಸುಮಲತಾ ಅಂಬರೀಶ್ ಬುಧವಾರ ಘೋಷಣೆ ಮಾಡಿದ್ದಾರೆ. ಈ ಮೂಲಕ ಹೆಚ್.ಡಿ.ಕುಮಾರಸ್ವಾಮಿಗೆ ನಾಮಪತ್ರ ಸಲ್ಲಿಸಲು ಹಾದಿ ಸುಗಮಗೊಳಿಸಿದ್ದರು.
ರಾಜ್ಯ ಮಟ್ಟದ ಮೈತ್ರಿ ನಾಯಕರ ಜೊತೆಗೂಡಿ ತೆರಳಿ ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ, ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿ ಮಂಡ್ಯ ವಿಶ್ವ ವಿದ್ಯಾನಿಲಯದ ಆವರಣದಲ್ಲಿ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿ ದ್ದಾರೆ. ಸಮಾವೇಶದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸೇರಿ ಜಿಲ್ಲೆಯ ಜೆಡಿಎಸ್, ಬಿಜೆಪಿ ನಾಯಕರು ಭಾಗಿಯಾಗಲಿದ್ದಾರೆ.
ಇಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ
Date: