ಬೆಂಗಳೂರು:- ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತನನ್ನು ಎನ್‌ಐಎ ವಶಕ್ಕೆ ಪಡೆದಿರುವ ಬಗ್ಗೆ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.
ಮತಿನ್ ಎಂಬುವನು ಸಿಮ್ ಖರೀದಿಸಿ ಕೊಟ್ಟ ವಿಳಾಸ, ದಾಖಲೆ ದುರುಪಯೋಗ ಮಾಡಿಕೊಂಡಿದ್ದಾನೆ. ಈ ಹಿನ್ನೆಲೆ ತೀರ್ಥಹಳ್ಳಿಯ ಸಾಯಿ ಪ್ರಕಾಶ್ನನ್ನು ವಿಚಾರಣೆ ಮಾಡಲಾಗಿದ್ದು, ಸತ್ಯಾಂಶ ಗೊತ್ತಾದ ನಂತರ ನಿನ್ನೆ ಎನ್‌ಐಎ ತಂಡ ವಾಪಸ್ ಕಳುಹಿಸಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಕೇಸ್ನಲ್ಲಿ ಬಿಜೆಪಿ ಕಾರ್ಯಕರ್ತರ ಭಾಗಿ ಬಗ್ಗೆ ಅಪಪ್ರಚಾರ ಮಾಡಲಾಗಿದೆ. ತೀರ್ಥಹಳ್ಳಿಯ ಮೊಬೈಲ್ ಅಂಗಡಿಯಲ್ಲಿ ಸಿಮ್ ಖರೀದಿಸಿ 8 ಹಿಂದುಗಳ ಹೆಸರಿನಲ್ಲಿ ಮತಿನ್ ನಕಲಿ ಫೇಸ್ಬುಕ್ ಅಕೌಂಟ್ ಮಾಡಿದ್ದಾನೆ. ಇವರನ್ನು NIA ತಂಡ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ. ನಾವೆಲ್ಲರೂ ಎಚ್ಚರಿಕೆಯಿಂದ ಇರಬೇಕಿದೆ. ಬಿಜೆಪಿ ಕಾರ್ಯಕರ್ತ ರಾಷ್ಟ್ರವಿರೋಧಿ ಕೃತ್ಯದಲ್ಲಿ ಭಾಗಿ ಆಗಲ್ಲ ಎಂದು ಹೇಳಿದ್ದಾರೆ.