No menu items!
12.4 C
Munich
Wednesday, April 29, 2026

ಬಿಜೆಪಿ ಹಿತದೃಷ್ಟಿಯಿಂದ ನಮ್ಮೊಂದಿಗೆ ಕೈ ಜೋಡಿಸಿ: ಈಶ್ವರಪ್ಪಗೆ ವಿಜಯೇಂದ್ರ ಮನವಿ

Must read

ಶಿವಮೊಗ್ಗ: ಮನಸ್ಸಿಗೆ ನೋವಾಗಿದ್ರೆ ಕ್ಷಮಿಸಿ, ದಯವಿಟ್ಟು ಪಕ್ಷಕ್ಕೆ ಸಹಕರಿಸಿ ಎಂದು ಕೆ ಎಸ್ ಈಶ್ವರಪ್ಪಗೆ ಬಿವೈವಿ ವಿಜಯೇಂದ್ರ ಮನವಿ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನಿಮ್ಮನ್ನು ಕೈ ಮುಗಿದು ಕೇಳಿಕೊಳ್ಳುತ್ತೇನೆ, ಏನಾದರೂ ನೋವಾಗಿದ್ದರೆ ದಯವಿಟ್ಟು ಮರೆತು ಪಕ್ಷಕ್ಕೆ ಸಹಕಾರ ನೀಡಿ, ಬಿಜೆಪಿ ಹಿತದೃಷ್ಟಿಯಿಂದ ನಮ್ಮೊಂದಿಗೆ ಕೈ ಜೋಡಿಸಿ ಎಂದು ಹೇಳಿದ್ದಾರೆ.
ನರೇಂದ್ರ ಮೋದಿಯರು ಮತ್ತೆ ಪ್ರಧಾನಿಯಾಗಬೇಕು ಎಂಬುದು ನಮ್ಮ ಆಶಯ, ಈಶ್ವರಪ್ಪ ಅವರು ಬೆಂಬಲ ನೀಡಿ ರಾಘವೇಂದ್ರನನ್ನು ಗೆಲ್ಲಿಸಬೇಕು ಎಂದು ಕೇಳಿಕೊಂಡಿದ್ದಾರೆ. ಈ ಮೊದಲು ಒಂದೆರಡು ದಿನಗಳ ಹಿಂದೆ ಮಾತನಾಡುವಾಗ ಕೇಂದ್ರ ವರಿಷ್ಠರು ಕೆಎಸ್ ಈಶ್ವರಪ್ಪ ಅವರಿಗೆ ಪರಿಸ್ಥಿತಿಯ ಮನವರಿಕೆ ಮಾಡಿಕೊಡಲಿದ್ದಾರೆ ಎಂದು ಹೇಳಿದ್ದರು.

- Advertisement -spot_img

More articles

- Advertisement -spot_img

Latest article